ಪಿಎಂ ಕೇರ್ಸ್ ಫಂಡ್‌ನ ಟ್ರಸ್ಟಿಯಾಗಿ ರತನ್ ಟಾಟಾ ನಾಮನಿರ್ದೇಶನ

ಪಿಎಂ ಕೇರ್ಸ್ ಫಂಡ್‌ನ ಟ್ರಸ್ಟಿಯಾಗಿ ರತನ್ ಟಾಟಾ ನಾಮನಿರ್ದೇಶನ

ನವದೆಹಲಿ: ಟಾಟಾ ಸನ್ಸ್ ಅಧ್ಯಕ್ಷ ಎಮೆರಿಟಸ್ ರತನ್ ಟಾಟಾ, ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಕೆಟಿ ಥಾಮಸ್ ಮತ್ತು ಲೋಕಸಭೆಯ ಮಾಜಿ ಉಪ ಸ್ಪೀಕರ್ ಕರಿಯಾ ಮುಂಡಾ ಅವರನ್ನು ಪಿಎಂ ಕೇರ್ಸ್ ಫಂಡ್‌ನ ಟ್ರಸ್ಟಿಗಳಾಗಿ ನಾಮನಿರ್ದೇಶನ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. 

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ನಿರ್ಮಲಾ ಸೀತಾರಾಮನ್ ಅವರು ಭಾಗವಹಿಸಿದ್ದ ಟ್ರಸ್ಟಿಗಳ ಮಂಡಳಿಯ ಸಭೆ ನಡೆಸಿದ ಒಂದು ದಿನದ ನಂತರ ಈ ಘೋಷಣೆ ಮಾಡಲಾಗಿದೆ.