ಧಾರವಾಡದ ಕೆಸಿಡಿ ಮೈದಾನದಲ್ಲಿ ಗ್ಯಾರಂಟಿ ಫಲಾನುಭವಿಗಳ ಸಮಾಗಮ

ಧಾರವಾಡದ ಕೆಸಿಡಿ ಮೈದಾನದಲ್ಲಿ ಗ್ಯಾರಂಟಿ ಫಲಾನುಭವಿಗಳ ಸಮಾಗಮ

ಧಾರವಾಡ: ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ತಾನು ಕೊಟ್ಟಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. 

ಈ ಗ್ಯಾರಂಟಿ ಯೋಜನೆಗಳ ಸದುಪಯೋಗಪಡಿಸಿಕೊಂಡ ಫಲಾನುಭವಿಗಳಿಗಾಗಿಯೇ ಧಾರವಾಡದ ಕೆಸಿಡಿ ಮೈದಾನದಲ್ಲಿ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದ್ದು, ಕೆಸಿಡಿ ಮೈದಾನದಲ್ಲಿ ಫಲಾನುಭವಿಗಳ ಸಮಾಗಮವೇ ಆಗಿದೆ. 

ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ನೇತೃತ್ವದಲ್ಲಿ ಈ ಸಮಾವೇಶ ನಡೆದಿದ್ದು, ಸಚಿವರಿಗೆ ಜಿಲ್ಲಾಧಿಕಾರಿ ದಿವ್ಯಪ್ರಭು, ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ, ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಸೇರಿದಂತೆ ಅನೇಕ ಅಧಿಕಾರಿಗಳು ಸಾಥ್ ನೀಡಿದ್ದಾರೆ. 

ಈ ಸಮಾವೇಶಕ್ಕೆ ಬರುವ ಫಲಾನುಭವಿಗಳಿಗೆ ಜಿಲ್ಲೆಯ ಎಲ್ಲ ಹಳ್ಳಿಗಳಿಗೂ ಸಾರಿಗೆ ಬಸ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಬಸ್ ಮುಖಾಂತರ ಜನ ಕೆಸಿಡಿ ಮೈದಾನಕ್ಕೆ ಬಂದಿದ್ದರು.