ಪ್ರಧಾನಿ ಮೋದಿ ಸಮ್ಮುಖದಲ್ಲಿ ಗುಜರಾತ್‌ನ 18ನೇ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಭೂಪೇಂದ್ರ ಪಟೇಲ್

ಪ್ರಧಾನಿ ಮೋದಿ ಸಮ್ಮುಖದಲ್ಲಿ ಗುಜರಾತ್‌ನ 18ನೇ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಭೂಪೇಂದ್ರ ಪಟೇಲ್

ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ವಿವಿಧ ರಾಜ್ಯಗಳ ಬಿಜೆಪಿ ಸಿಎಂಗಳು ಭಾಗವಹಿಸಿದ್ದ ಸಮಾರಂಭದಲ್ಲಿ ಭೂಪೇಂದ್ರ ಪಟೇಲ್ ಎರಡನೇ ಬಾರಿಗೆ ಗುಜರಾತ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು. 

ಗಾಂಧಿನಗರದ ಹೊಸ ಸೆಕ್ರೆಟರಿಯೇಟ್ ಬಳಿಯ ಹೆಲಿಪ್ಯಾಡ್ ಮೈದಾನದಲ್ಲಿ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು 18ನೇ ಮುಖ್ಯಮಂತ್ರಿಯಾಗಲಿರುವ ಭೂಪೇಂದ್ರ ಪಟೇಲ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಪಟೇಲ್ ಅವರು ಸೆಪ್ಟೆಂಬರ್ 13, 2021 ರಂದು ಗುಜರಾತ್‌ನ 17 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಇಂದು ಎರಡನೇ ಬಾರಿ ಭೂಪೇಂದ್ರ ಪಟೇಲ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಿಜೆಪಿ 2022 ರ ಚುನಾವಣೆಯಲ್ಲಿ ಸತತ 7ನೇ ಬಾರಿಗೆ ಭರ್ಜರಿ ಗೆಲುವಿನೊಂದಿಗೆ ಗುಜರಾತ್‌ನಲ್ಲಿ ಇತಿಹಾಸವನ್ನು ಸೃಷ್ಟಿಸಿತು. ತಮ್ಮದೇ ದಾಖಲೆಯನ್ನು ಮುರಿದು ಪಟೇಲ್ ಮತ್ತೊಮ್ಮೆ 2022ರ ಚುನಾವಣೆಯಲ್ಲಿ ಘಟ್ಲೋಡಿಯಾ ಕ್ಷೇತ್ರದಿಂದ 1,91,000 ಮತಗಳ ಭರ್ಜರಿ ಅಂತರದಿಂದ ಗೆದ್ದರು.