ಬ್ರೇಕಿಂಗ್ : ಗುಜರಾತ್ ಸೇತುವೆ ಕುಸಿತ 30 ಜನ ಸಾವು

ಗುಜರಾತ್ ನ ಮೊರ್ಬಿನಲ್ಲಿ ಸಂಭವಿಸಿದ ತೂಗು ಸೇತುವೆ ದುರಂತದಲ್ಲಿ 30 ಜನ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಇನ್ನು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.ವರದಿ ಪ್ರಕಾರ ನೂರಕ್ಕೂ ಹೆಚ್ಚು ಮಂದಿ ಮಚ್ಚು ನದಿಗೆ ಬಿದ್ದಿದ್ದಾರೆ ಎನ್ನಲಾಗುತ್ತಿದೆ. ಇನ್ನು ನದಿಯಲ್ಲಿ ಬಿದ್ದವರ ರಕ್ಷಣಾ ಕಾರ್ಯಾಚರಣೆ ಚುರುಕಾಗಿದೆ. ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
ಜೊತೆಗೆ ದುರ್ಘಟನೆಯಲ್ಲಿ ಮೃತರಾದವರಿಗೆ ಕೇಂದ್ರ ಸರ್ಕಾರದಿಂದ 2 ಲಕ್ಷ ರೂಪಾಯಿ ಪರಿಹಾರವನ್ನ ಘೋಷಣೆ ಮಾಡಲಾಗಿದೆ. ಗಾಯಾಳುಗಳಿಗೆ 50 ಸಾವಿರ ರೂಪಾಯಿ ನೀಡೋದಾಗಿ ಘೋಷಣೆ ಮಾಡಿದೆ.