ಹರ್ ಘರ್ ತಿರಂಗಾ ಅಭಿಯಾನ : ನಿಮ್ಮ 'ಡಿಪಿಗಳನ್ನ ತ್ರಿವರ್ಣ ಧ್ವಜಕ್ಕೆ ಬದಲಾಯಿಸಿ' ಎಂದ ಪ್ರಧಾನಿ ಮೋದಿ

ಹರ್ ಘರ್ ತಿರಂಗಾ ಅಭಿಯಾನ : ನಿಮ್ಮ 'ಡಿಪಿಗಳನ್ನ ತ್ರಿವರ್ಣ ಧ್ವಜಕ್ಕೆ ಬದಲಾಯಿಸಿ' ಎಂದ ಪ್ರಧಾನಿ ಮೋದಿ

ನವದೆಹಲಿ : ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ತಮ್ಮ ಸೋಶಿಯಲ್ ಮೀಡಿಯಾದ ಪ್ರೊಫೈಲ್ ಚಿತ್ರವನ್ನು ರಾಷ್ಟ್ರ ಧ್ವಜವನ್ನಾಗಿ ಬದಲಾಯಿಸಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಕರೆ ನೀಡಿದ್ದಾರೆ. 

77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಹರ್ ಘರ್ ತಿರಂಗಾ ಅಭಿಯಾನ ಅಂಗವಾಗಿ 'ದೇಶದ ಜನರು ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳ ಡಿಪಿಯನ್ನು ರಾಷ್ಟ್ರಧ್ವಜವನ್ನಾಗಿ ಬದಲಾಯಿಸಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. 

ಈ ಬಗ್ಗೆ ಟ್ವೀಟ್ ಮೂಲಕ ಪ್ರಧಾನಿ ಮೋದಿ, ಹರ್ ಘರ್ ತಿರಂಗಾ ಅಭಿಯಾನದಲ್ಲಿ ಉತ್ಸಾಹದಿಂದ ಭಾಗವಹಿಸಿ, ಡಿಪಿಯನ್ನು ರಾಷ್ಟ್ರ ಧ್ವಜವಾಗಿ ಬದಲಾಯಿಸೋಣ. ದೇಶದ ಪ್ರೀತಿ ಮತ್ತು ನಮ್ಮ ನಡುವಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸೋಣ ಎಂದಿದ್ದಾರೆ. 

ಭಾರತೀಯ ಪ್ರಜೆಗಳ ಹೃದಯದಲ್ಲಿ ದೇಶಭಕ್ತಿಯ ಭಾವನೆಯನ್ನು ಮೂಡಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 'ಆಜಾದಿ ಕಾ ಅಮೃತ್ ಮಹೋತ್ಸವ'ದ ಆಶ್ರಮಯದಲ್ಲಿ ಹರ್ ಘರ್ ತಿರಂಗಾ ಅಭಿಯಾನವನ್ನು ಆರಂಭಿಸಿದೆ.