ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ

ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ

ಹರಿಯಾಣದ ರಾಜಕೀಯದಲ್ಲಿ ದೊಡ್ಡ ಬೆಳವಣಿಗೆ ಆಗಿದೆ. ಮುಖ್ಯಮಂತ್ರಿ ಮನೋಹರ್‌ ಲಾಲ್ ಖಟ್ಟರ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 

ಇದೀಗ ಬಿಜೆಪಿ ಬೆಂಬಲಕ್ಕೆ ಪಕ್ಷೇತರ ಶಾಸಕರು ಮುಂದೆ ಬಂದಿದ್ದಾರೆ. ಈ ಬೆಳವಣಿಗೆಯಿಂದಾಗಿ ಬಿಜೆಪಿ ಮತ್ತು ಜನನಾಯಕ ಜನತಾ ಪಕ್ಷ (ಜೆಜೆಪಿ) ಮೈತ್ರಿ ಮುರಿದು ಬೀಳುವುದು ಖಚಿತವಾಗಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸೀಟು ಹಂಚಿಕೆ ವಿಚಾರದಲ್ಲಿ ಉಂಟಾಗಿರುವ ಭಿನ್ನಾಭಿಪ್ರಾಯದಿಂದ ಈ ಮೈತ್ರಿ ಮುರಿದು ಬೀಳುತ್ತಿದೆ ಎನ್ನಲಾಗುತ್ತಿದೆ.