ಹಾವೇರಿ: ತವರಿನಲ್ಲಿ ಸಿದ್ಧ ಉಡುಪು ತಯಾರಿಕಾ ಘಟಕಕ್ಕೆ ಸಿಎಂ ಚಾಲನೆ

ಹಾವೇರಿ: ತವರಿನಲ್ಲಿ ಸಿದ್ಧ ಉಡುಪು ತಯಾರಿಕಾ ಘಟಕಕ್ಕೆ ಸಿಎಂ ಚಾಲನೆ

ಹಾವೇರಿ: ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಮುನವಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಶಾಹಿ ಎಕ್ಸ್ಪೋರ್ಟ್ಸ್ ಲಿಮಿಟೆಡ್ ಕಂಪನಿಯ ಸಿದ್ದ ಉಡುಪು ನಿರ್ಮಾಣ ಘಟಕದ ಕಟ್ಟಡಕ್ಕೆ ಸಿಎಂ ಬಸವರಾಜ ಬೊಮ್ಮಾಯಿಯವರು ಭೂಮಿ ಪೂಜೆ ನೆರವೇರಿಸಿದರು. 

ತವರೂ ಕ್ಷೇತ್ರದಲ್ಲಿ ನಿರ್ಮಾಣವಾಗುತ್ತಿರುವ ಸಿದ್ಧ ಉಡುಪುಗಳ ನಿರ್ಮಾಣ ಘಟಕದ ಉದ್ಘಾಟನೆ ನೆರವೇರಿಸಿ ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಕಲ್ಪಿಸುವ ಹಾಗೂ ಸ್ಥಳೀಯ ಉದ್ಯಮಕ್ಕೆ ಉತ್ತೇಜನ ನೀಡುವಲ್ಲಿ ಈ ನಿರ್ಧಾರ ಪ್ರಮುಖ ಪಾತ್ರವಹಿಸಿದ್ದು, ಇದೊಂದು ಮಹತ್ವದ ಕಾರ್ಯ ಎಂದು ಶ್ಲಾಘಿಸಿದರು.