ಹೆಚ್.ಡಿ.ಕುಮಾರಸ್ವಾಮಿ ಆರೋಗ್ಯದಲ್ಲಿ ಮತ್ತೆ ಏರುಪೇರು - ಆಸ್ಪತ್ರೆಗೆ ದಾಖಲು

ಹೆಚ್.ಡಿ.ಕುಮಾರಸ್ವಾಮಿ ಆರೋಗ್ಯದಲ್ಲಿ ಮತ್ತೆ ಏರುಪೇರು - ಆಸ್ಪತ್ರೆಗೆ ದಾಖಲು

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಾಗುತ್ತಿದೆ. 

ಕಫದ ಸಮಸ್ಯೆಯಿಂದ ಬಳಲುತ್ತಿರುವ ಎಚ್‌ಡಿ ಕುಮಾರಸ್ವಾಮಿ ಇತ್ತೀಚಿಗಷ್ಟೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಇಂದು ಕೂಡ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೆ ಅವರು ತಮ್ಮ ಆರೋಗ್ಯ ಸಮಸ್ಯೆಗೆ ಚಿಕಿತ್ಸೆ ಪಡೆಯಲು ವಿದೇಶಕ್ಕೂ ತೆಳಲಿದ್ದಾರೆ ಎಂದು ತಿಳಿದುಬಂದಿದೆ.