ಹು-ಧಾ ಮಹಾನಗರ ಪಾಲಿಕೆ ಆಯುಕ್ತ ಗೋಪಾಲಕೃಷ್ಣ ವರ್ಗಾವಣೆ

ಧಾರವಾಡ: ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ಡಾ.ಗೋಪಾಲಕೃಷ್ಣ ಬಿ. ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಅವರ ಸ್ಥಾನಕ್ಕೆ ಇನ್ನೂ ರಾಜ್ಯ ಸರ್ಕಾರ ಯಾವ ಅಧಿಕಾರಿಯನ್ನು ನೇಮಿಸಿಲ್ಲ. ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ಗೋಪಾಲಕೃಷ್ಣ ಅವರನ್ನು ಚಿಕ್ಕಮಗಳೂರು ಜಿಲ್ಲಾ ಪಂಚಾಯ್ತಿ ಸಿಇಓ ಆಗಿ ನೇಮಿಸಿದೆ.