ಆರೋಗ್ಯ ಸಚಿವ ಬಿ ಶ್ರೀರಾಮುಲುಗೂ ಕೊರೋನಾ ಪಾಸಿಟಿವ್

ಆರೋಗ್ಯ ಸಚಿವ ಬಿ ಶ್ರೀರಾಮುಲುಗೂ ಕೊರೋನಾ ಪಾಸಿಟಿವ್

ಬೆಂಗಳೂರು : ಈಗಾಗಲೇ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಜನಪ್ರತಿನಿಧಿಗಳಿಗೆ ಶಾಕ್ ಕೊಟ್ಟಿರುವ ಕೊರೊನಾ, ಇದೀಗ ಆರೋಗ್ಯ ಸಚಿವ ಬಿ ಶ್ರೀರಾಮುಲುಗು ಶಾಕ್ ನೀಡಿದೆ. 

ಸಚಿವ ಬಿ ಶ್ರೀರಾಮುಲುಗೂ ಕೊರೊನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. 

ಈ ಕುರಿತಂತೆ ಟ್ವಿಟ್ ಮಾಡಿರುವ ಸಚಿವ ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನ ಪಾಸಿಟಿವ್ ಬಂದಿದೆ ಎಂದಿದ್ದಾರೆ.