ಅತಿವೃಷ್ಟಿ: ಬೆಂಗಳೂರು- ಮೈಸೂರು ರಸ್ತೆಗೆ ಪರ್ಯಾಯ ಮಾರ್ಗದ ವ್ಯವಸ್ಥೆಗೆ ಸಿಎಂ ಸೂಚನೆ

ಅತಿವೃಷ್ಟಿ: ಬೆಂಗಳೂರು- ಮೈಸೂರು ರಸ್ತೆಗೆ ಪರ್ಯಾಯ ಮಾರ್ಗದ ವ್ಯವಸ್ಥೆಗೆ ಸಿಎಂ ಸೂಚನೆ

ಬೆಂಗಳೂರು: ಅತಿವೃಷ್ಟಿಯಿಂದ ಬೆಂಗಳೂರು, ಮೈಸೂರು ಹೆದ್ದಾರಿಯ ಕೆಲವು ಭಾಗಗಳಲ್ಲಿ ನೀರು ನಿಂತಿದೆ. ಇದನ್ನು ಗಮನಿಸಿ ಪರ್ಯಾಯ ಮಾರ್ಗ ಪ್ರಾರಂಭಿಸಲು ಸೂಚನೆ ನೀಡಲಾಗಿದೆ. ಅದರಂತೆ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ನಗರದ ತಮ್ಮ ನಿವಾಸದ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ನಿನ್ನೆ ಅತಿವೃಷ್ಟಿಯಾಗಿರುವ 16 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಹಲವಾರು ಸೂಚನೆಗಳನ್ನು ನೀಡಲಾಗಿದೆ. ಬೆಂಗಳೂರು- ಮೈಸೂರಿನ ಆಯುಕ್ತರು, ಮಂಡ್ಯ ಹಾಗೂ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಲು ಹೇಳಿದ್ದೇನೆ" ಎಂದರು.