ರಾಜ್ಯದಲ್ಲಿ ಇಂದಿನಿಂದ 5 ದಿನಗಳ ಕಾಲ ಭರ್ಜರಿ ಮಳೆ

ರಾಜ್ಯದಲ್ಲಿ ಇಂದಿನಿಂದ 5 ದಿನಗಳ ಕಾಲ ಭರ್ಜರಿ ಮಳೆ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ 5 ದಿನಗಳ ಕಾಲ (ಜೂನ್ 20ರವರೆಗೆ) ಭಾರೀ ಮಳೆಯ ಮುನ್ಸೂಚನೆ ಸಿಕ್ಕಿದೆ. ಗಂಟೆಯ 40-50‌ ಕಿಲೋ ಮೀಟರ್ ವೇಗದಲ್ಲಿ ಬಿರುಗಾಳಿ ಸಹಿತ ಮಳೆ ಸೂಚನೆ ಸಿಕ್ಕಿದೆ. 

ಕರಾವಳಿ ಕರ್ನಾಟಕ ಹಾಗೂ ಉತ್ತರ ಒಳನಾಡಿದ ಬಹುತೇಕ ಜಿಲ್ಲೆಯಲ್ಲಿ ಮಳೆ ಸೂಚನೆ‌ ಲಭ್ಯವಾಗಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆಯ ಅಲರ್ಟ್ ಸಿಕ್ಕಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಕಲಬುರುಗಿ, ವಿಜಯಪುರ, ಕೊಪ್ಪಳದಲ್ಲಿ ಮಳೆ ಬೆಂಗಳೂರಿನಲ್ಲಿಯೂ ಜೂನ್ 20ರ ವರೆಗೆ ಸಾಧರಣ ಮಳೆ ಸಂಭವವಿದೆ. ಸಂಜೆ ಬಳಿಕ ಬೆಂಗಳೂರಿನಲ್ಲಿ ಎಂದಿನಂತೆ ಮಳೆಯ ಮುನ್ಸೂಚನೆ‌ಯನ್ನು ಹವಮಾನಾ ಇಲಾಖೆ ನೀಡಿದೆ.