ರಾಜ್ಯದ ಕರಾವಳಿ ಭಾಗಕ್ಕೆ ಇನ್ನೂ ಮೂರು ದಿನಗಳ‌ ಕಾಲ ಭಾರಿ ಮಳೆ‌ ಸಾಧ್ಯತೆ

ರಾಜ್ಯದ ಕರಾವಳಿ ಭಾಗಕ್ಕೆ ಇನ್ನೂ ಮೂರು ದಿನಗಳ‌ ಕಾಲ ಭಾರಿ ಮಳೆ‌ ಸಾಧ್ಯತೆ

ಬೆಂಗಳೂರು: ಕರಾವಳಿ ಭಾಗಕ್ಕೆ ಇನ್ನೂ ಮೂರು ದಿನಗಳ‌ ಕಾಲ ಮಳೆ‌ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಮಹಾರಾಷ್ಟ್ರದಿಂದ ಕೇರಳ ಕರಾವಳಿ ತೀರದಲ್ಲಿ ಮೇಲ್ಮೈ ಸುಳಿಗಾಳಿ ಬೀಸಲಿದೆ. ಹೀಗಾಗಿ ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. 

 

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಕರಾವಳಿ ಜಿಲ್ಲೆಗಳಿಗೆ ಮುಂದುವರೆದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಎಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಕೆಲವು ಕಡೆ ಭಾರಿ ಮಳೆ ಕಾರಣ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಮಳೆ ಸಾಧ್ಯತೆ ಇದೆ. 

ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದ್ದು, ಅಲ್ಲಲ್ಲಿ ಭಾರಿ ಮಳೆ‌ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದ್ದು, ಬೆಂಗಳೂರಿನಲ್ಲೂ ಇಂದು ಸಂಜೆ ಬಳಿಕ ಮಳೆ ಸಾಧ್ಯತೆ ಇದೆ.ಬಿರುಗಾಳಿ ಸಹಿತ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.