ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ

ನವದೆಹಲಿ: ಇಂದಿನಿಂದ ಮೂರು ದಿನಗಳ ಕಾಲ ಕರ್ನಾಟಕ ಹಾಗೂ ದೇಶದ ಇತರ ರಾಜ್ಯಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ ರೆಡ್, ಯೆಲ್ಲೋ ಅಲರ್ಟ್ ಘೋಷಣೆ ನೀಡಿದೆ.
ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಕರ್ನಾಟಕದಲ್ಲಿ ಜೂನ್ 27ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದ್ದು, ಜೂನ್ 27ರವರೆಗೆ ಸೌರಾಷ್ಟ್ರ ಮತ್ತು ಕಚ್‌ನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜೂನ್ 29ರವರೆಗೆ ಗುಜರಾತ್ ಪ್ರದೇಶ ಮತ್ತು ಕರಾವಳಿ ಕರ್ನಾಟಕದಲ್ಲಿ ಜೂನ್ 27ರವರೆಗೆ ತಮಿಳುನಾಡು, ಜೂನ್ 27ರಂದು ಉತ್ತರ ಒಳನಾಡು, ಜೂನ್ 27 ಮತ್ತು 28ರಂದು ತೆಲಂಗಾಣ ಮತ್ತು ಜೂನ್ 25 ರಿಂದ ಜೂನ್ 28 ರವರೆಗೆ ಆಂಧ್ರಪ್ರದೇಶದ ಕರಾವಳಿಯಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.
ಅಲ್ಲದೆ, ಐಎಂಡಿ ರಾಷ್ಟ್ರ ರಾಜಧಾನಿ ದೆಹಲಿಗೆ ಹಳದಿ ಎಚ್ಚರಿಕೆ ನೀಡಿದ್ದು, ಜುಲೈ 1ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಗೋವಾ, ಕೇರಳ, ತಮಿಳುನಾಡು, ಪುದುಚೇರಿ, ಬಿಹಾರ, ಅರುಣಾಚಲ ಪ್ರದೇಶ ಮತ್ತು ಕೇಂದ್ರಾಡಳಿತ ಪ್ರದೇಶ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ, ಈ ರಾಜ್ಯಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.