ಧಾರವಾಡ: ಭಾರೀ ಮಳೆಯಾಗುವ ಸಾಧ್ಯತೆ: ಕೇಂದ್ರ ಸ್ಥಾನ ಬಿಡದಂತೆ ಅಧಿಕಾರಿಗಳಿಗೆ ಡಿಸಿ ಸೂಚನೆ

ಧಾರವಾಡ: ಹವಾಮಾನ ಇಲಾಖೆ ಮುನ್ಸೂಚನೆಯಂತೆ ಧಾರವಾಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದರಿಂದ ಜಿಲ್ಲೆಯಲ್ಲಿ ಮಳೆ, ಪ್ರವಾಹದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಎಲ್ಲಾ ಇಲಾಖೆಯ ಅಧಿಕಾರಿ, ಸಿಬ್ಬಂದಿ ಕಡ್ಡಾಯವಾಗಿ ತಮ್ಮ ಕೇಂದ್ರ ಸ್ಥಾನದಲ್ಲಿರಬೇಕೆಂದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶಿಸಿದ್ದಾರೆ.
ಮಳೆಯಿಂದ ಹಾನಿಗೊಳಗಾದ ಸಾರ್ವಜನಿಕರ ಮೂಲಭೂತ ಸೌಕರ್ಯಗಳನ್ನು ತುರ್ತಾಗಿ ಸರಿಪಡಿಸಲು ಕ್ರಮವಹಿಸಬೇಕು. ಆದ್ದರಿಂದ ಜಿಲ್ಲೆಯ ಎಲ್ಲಾ ಇಲಾಖೆಯ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಅವರ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಅನಿವಾರ್ಯ ಪರಿಸ್ಥಿತಿಯಲ್ಲಿ ರಜೆಯ ಮೇಲೆ ತೆರಳಬೇಕಾದಲ್ಲಿ ಜಿಲ್ಲಾಧಿಕಾರಿಗಳ ಪೂರ್ವಾನುಮತಿ ಪಡೆದು, ರಜೆಯ ಮೇಲೆ ತೆರಳಬೇಕೆಂದು ಡಿಸಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.