ಮೃತ ಸಂತೋಷ್ ಕುಟುಂಬಕ್ಕೆ ₹1 ಕೋಟಿ ಪರಿಹಾರ ಕೊಡಿ: ಶಾಸಕಿ ಹೆಬ್ಬಾಳ್ಕರ್ ಒತ್ತಾಯ

ಮೃತ ಸಂತೋಷ್ ಕುಟುಂಬಕ್ಕೆ ₹1 ಕೋಟಿ ಪರಿಹಾರ ಕೊಡಿ: ಶಾಸಕಿ ಹೆಬ್ಬಾಳ್ಕರ್ ಒತ್ತಾಯ

ಬೆಳಗಾವಿ: ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ್ ಕುಟುಂಬಕ್ಕೆ ರಾಜ್ಯ ಸರ್ಕಾರ ₹1 ಕೋಟಿ ಪರಿಹಾರ ನೀಡಬೇಕು. 4 ಕೋಟಿ ರೂ. ವೆಚ್ಚದ ಕಾಮಗಾರಿಯ ಬಾಕಿ ಬಿಲ್ ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಆಗ್ರಹಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರ ಸಂತೋಷ್ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ನೀಡಬೇಕು. ಪತ್ನಿಗೆ ಸರ್ಕಾರಿ ಕೆಲಸ ನೀಡಬೇಕು. ಸಂತೋಷ್ ನಿರ್ವಹಿಸಿರುವ 4 ಕೋಟಿ ರೂ. ಬಿಲ್ ತಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮೂವರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಎಫ್ ಐಆರ್ ಆಗಿದ್ದರೂ ಆರೋಪಿಗಳ ಬಂಧನವಾಗಿಲ್ಲ. ಮೂವರು ಬಂಧಿಸಲು ಸಂತೋಷ್ ಮೊಬೈಲ್ ನಲ್ಲಿ ಸಾಕ್ಷ್ಯವಿದೆ. ಆದರೆ ಈವರೆಗೆ ಏಕೆ ಬಂದಿಸಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ. ಕೆ.ಎಸ್. ಈಶ್ವರಪ್ಪನವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಸಚಿವ ಸಂಪುಟದಿಂದ ಈಶ್ವರಪ್ಪನವರನ್ನು ವಜಾ ಮಾಡಬೇಕು. ಸಚಿವ ಕೆ.ಎಸ್.ಈಶ್ವರಪ್ಪರನ್ನು ಬಂಧಿಸಿ ಶಿಕ್ಷೆಯಾಗಬೇಕು. ಪ್ರಕರಣವನ್ನು ಸಿಬಿಐಗೆ ನೀಡಬೇಕೆಂದು ಆಗ್ರಹಿಸಿದ್ದಾರೆ.