ಧಾರವಾಡ: ಕುಡಿಯುವ ನೀರಿಗಾಗಿ ಆರಂಭವಾಯ್ತು ಸಹಾಯವಾಣಿ

ಧಾರವಾಡ: ಧಾರವಾಡ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಅಗತ್ಯ ಕ್ರಮವಹಿಸಲಾಗಿದ್ದು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ನಿರ್ದೇಶನದ ಮೇರೆಗೆ ಧಾರವಾಡ ತಾಲೂಕಾ ಪಂಚಾಯ್ತಿ ಕಚೇರಿಯಲ್ಲಿ ಕಂಟ್ರೋಲ್ ರೂಮ ಸ್ಥಾಪಿಸಿ, ಸಹಾಯವಾಣಿ ಆರಂಭಿಸಲಾಗಿದೆ.
ಧಾರವಾಡ ತಾಲೂಕಿನ ಗ್ರಾಮಗಳಲ್ಲಿ ಕುಡಿಯುವ ನೀರು ಒದಗಿಸಲು ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರು ತಮ್ಮ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಉಂಟಾದಲ್ಲಿ ಧಾರವಾಡ ತಾಲೂಕ ಪಂಚಾಯ್ತಿ ಕಾರ್ಯಾಲಯದ ದೂರವಾಣಿ ಸಂಖ್ಯೆ 0836-2448551ಕ್ಕೆ ಕರೆ ಮಾಡಿ, ಮಾಹಿತಿ ನೀಡಿದ್ದಲ್ಲಿ ತಕ್ಷಣ ಪರಿಹಾರ ಕ್ರಮ ವಹಿಸಲಾಗುವುದು ಎಂದು ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.