ಐಪಿಎಲ್ 2022: ಆರ್‌ಸಿಬಿ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

ನವದೆಹಲಿ: 2022ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೆ ದಿನಗಣನೆ ಆರಂಭವಾಗಿದ್ದು, ಮಾರ್ಚ್ 26ರಿಂದ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಶುರುವಾಗಲಿವೆ. ಇನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಉದ್ಘಾಟನಾ ಪಂದ್ಯ ಮಾರ್ಚ್ 26ರಂದು ನಡೆಯಲಿದ್ದು, ಈ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತ ನೈಟ್ ರೈಡರ್ಸ್ ತಂಡಗಳು ಸೆಣಸಾಟ ನಡೆಸಲಿವೆ. ಈ ಪಂದ್ಯ ಸಂಜೆ 7.30ಕ್ಕೆ ನಿಗದಿಯಾಗಿದ್ದು ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ ಮಾ. 27ರ ಭಾನುವಾರದಂದು ಸಂಜೆ 7:30ಕ್ಕೆ ನಡೆಯಲಿರುವ ಪಂದ್ಯದ ಮೂಲಕ ಈ ಬಾರಿಯ ಟೂರ್ನಿಯಲ್ಲಿ ಕಣಕ್ಕಿಳಿಯಲಿದೆ. ತಂಡದ ಸಂಪೂರ್ಣ ಲೀಗ್ ಹಂತದ ಪಂದ್ಯಗಳ ವೇಳಾಪಟ್ಟಿ ಈ ಕೆಳಕಂಡಂತಿದೆ. ಆರ್‌ಸಿಬಿ ಸಂಪೂರ್ಣ ವೇಳಾಪಟ್ಟಿ: 27 ಮಾರ್ಚ್ 2022- 7.30 pm- ಪಂಜಾಬ್ ಕಿಂಗ್ಸ್ vs ಆರ್‌ಸಿಬಿ 30 ಮಾರ್ಚ್ 2022 - 7.30 pm - ಆರ್‌ಸಿಬಿ vs ಕೋಲ್ಕತ್ತಾ ನೈಟ್ ರೈಡರ್ಸ್ 5 ಏಪ್ರಿಲ್ 2022 - 7.30 pm - ಆರ್‌ಸಿಬಿ vs ರಾಜಸ್ಥಾನ ರಾಯಲ್ಸ್ 9 ಏಪ್ರಿಲ್ 2022 - 7.30 pm- ಆರ್‌ಸಿಬಿ vs ಮುಂಬೈ ಇಂಡಿಯನ್ಸ್ 12 ಏಪ್ರಿಲ್ 2022- 7.30 pm- ಆರ್‌ಸಿಬಿ vs ಚೆನ್ನೈ ಸೂಪರ್ ಕಿಂಗ್ಸ್ 16 ಏಪ್ರಿಲ್ 2022-7.30 pm- ಆರ್‌ಸಿಬಿ vs ಡೆಲ್ಲಿ ಕ್ಯಾಪಿಟಲ್ಸ್ 19 ಏಪ್ರಿಲ್ 2022 - 7.30 pm- ಆರ್‌ಸಿಬಿ vs ಲಕ್ನೋ ಸೂಪರ್ ಜೈಂಟ್ಸ್ 23 ಏಪ್ರಿಲ್ 2022- 7.30 pm- ಆರ್‌ಸಿಬಿ vs ಸನ್ ರೈಸರ್ಸ್ ಹೈದರಾಬಾದ್ 26 ಏಪ್ರಿಲ್ 2022- 7.30 pm- ಆರ್‌ಸಿಬಿ vs ರಾಜಸ್ಥಾನ ರಾಯಲ್ಸ್ 30 ಏಪ್ರಿಲ್ 2022- 3.30 pm- ಆರ್‌ಸಿಬಿ vs ಗುಜರಾತ್ ಟೈಟಾನ್ಸ್ 4 ಮೇ 2022- 7.30 pm- ಆರ್‌ಸಿಬಿ vs ಚೆನ್ನೈ ಸೂಪರ್ ಕಿಂಗ್ಸ್ 8 ಮೇ 2022- ಮಧ್ಯಾಹ್ನ 3.30- ಆರ್‌ಸಿಬಿ vs ಸನ್ ರೈಸರ್ಸ್ ಹೈದರಾಬಾದ್ 13 ಮೇ 2022- 7.30 pm- ಆರ್‌ಸಿಬಿ vs ಪಂಜಾಬ್ ಕಿಂಗ್ಸ್ 19 ಮೇ 2022- 7.30pm- ಆರ್‌ಸಿಬಿ vs ಗುಜರಾತ್ ಟೈಟಾನ್ಸ್