ಸಿ.ಡಿ ಪ್ರಕರಣದ ವರದಿ ಸಲ್ಲಿಸುವಂತೆ ಹೈಕೋರ್ಟ್ ಸೂಚನೆ

ಸಿ.ಡಿ ಪ್ರಕರಣದ ವರದಿ ಸಲ್ಲಿಸುವಂತೆ ಹೈಕೋರ್ಟ್ ಸೂಚನೆ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿ.ಡಿ ಪ್ರಕರಣದ ಕುರಿತು ಎಸಿಪಿ ಎಂ.ಸಿ ಕವಿತಾ ಅವರು ಸಲ್ಲಿಸಿರುವ ವರದಿಯನ್ನು ಎಸ್ಐಟಿ ಮುಖ್ಯಸ್ಥ ಸೌಮೇಂದು ಮುಖರ್ಜಿ ಅವರಿಗೆ ಸಲ್ಲಿಸಬೇಕೆಂದು ಹೈಕೋರ್ಟ್ ಆದೇಶ ನೀಡಿದೆ. ಸಂತ್ರಸ್ತ ಯುವತಿಯು ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದಾಖಲಿಸಿರುವ ದೂರಿಗೆ ಸಂಬಂಧಿಸಿದಂತೆ ಮುಂದಿನ ವಿಚಾರಣೆಯ ಸಂದರ್ಭದಲ್ಲಿ ಆ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬಹುದಾಗಿದೆ ಎಂದು ಮಂಗಳವಾರ ಕರ್ನಾಟಕ ಹೈಕೋರ್ಟ್ ಹೇಳಿದೆ. ಮಾರ್ಚ್ 29ರಂದು ಬೆಂಗಳೂರು ಪೊಲೀಸ್ ಆಯುಕ್ತರು ಸಂತ್ರಸ್ತೆಯ ದೂರಿಗೆ ಸಂಬಂಧಿಸಿದಂತೆ ಸಿಆರ್‌ಪಿಸಿ ಸೆಕ್ಷನ್ 173ರ ಅಡಿ ಎಸಿಪಿ ಕವಿತಾ ಅವರಿಗೆ ಪ್ರಕರಣದ ತನಿಖೆ ನಡೆಸುವಂತೆ ಆದೇಶಿಸಿದ್ದರು.