ಅಕ್ರಮ ಊಬರ್, ರ‍್ಯಾಪಿಡೋ ಸೇವೆ ಸ್ಥಗಿತಗೊಳಿಸಲು ಹೈಕೋರ್ಟ್ ಸೂಚನೆ

ಅಕ್ರಮ ಊಬರ್, ರ‍್ಯಾಪಿಡೋ ಸೇವೆ ಸ್ಥಗಿತಗೊಳಿಸಲು ಹೈಕೋರ್ಟ್ ಸೂಚನೆ

ಬೆಂಗಳೂರು: ಊಬರ್, ರ‍್ಯಾಪಿಡೋ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ರಾಜ್ಯ ಸರಕಾರ ಯಾವುದೇ ಮಾರ್ಗಸೂಚಿ ರೂಪಿಸಿಲ್ಲ. ಹೀಗಾಗಿ ಅಕ್ರಮವಾಗಿ ಕಾರ್ಯಾಚರಿಸುವ ಈ ಟ್ಯಾಕ್ಸಿಗಳ ಸೇವೆಯನ್ನು ಆರು ವಾರಗಳ ಒಳಗಾಗಿ ಸ್ಥಗತಿಗೊಳಿಸಲು ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ. 

ಇಂದು ಉಬರ್, ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಸಂಬಂಧ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಶ್ಯಾಮ್ ಪ್ರಸಾದ್ ಅವರನ್ನು ಒಳಗೊಂಡ ನ್ಯಾಯಪೀಠವು ವಿಚಾರಣೆ ನಡೆಸಿತು. 

ನಿಯಮಗಳಲ್ಲಿದೇ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಮಾಡುವಂತಿಲ್ಲ. ಮೂರು ತಿಂಗಳಲ್ಲಿ ನಿಯಮ ರೂಪಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿತು. ಅಲ್ಲದೇ ಆರು ವಾರಗಳಲ್ಲಿ ಉಬರ್, ರ್ಯಾಪಿಡೋ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವಂತೆ ಹೈಕೋರ್ಟ್ ನ್ಯಾಯಪೀಠವು ಆದೇಶಿಸಿದೆ. ಈ ಮೂಲಕ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯಲ್ಲಿ ತೊಡಗಿದ್ದಂತ ಉಬರ್, ರ‍್ಯಾಪಿಡೋಗಳಿಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದೆ.