ಸರ್ವಪಕ್ಷ ಸಭೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮಕ್ಕೆ ನೀಡಿದ ವಿವರಗಳ ಹೈಲೈಟ್ಸ್

ಸರ್ವಪಕ್ಷ ಸಭೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮಕ್ಕೆ ನೀಡಿದ ವಿವರಗಳ ಹೈಲೈಟ್ಸ್

ಬೆಂಗಳೂರು: ಜುಲೈ 11ರಂದು ಕಾವೇರಿ ನೀರು ನಿಯಂತ್ರಣ ಸಮಿತಿಯ 3ನೇ ಸಭೆ ನಡೆದು, ಜುಲೈ 12 ನೇ ದಿನಾಂಕದಿಂದ ಈ ತಿಂಗಳ ಕೊನೆಯವರೆಗೆ ಸುಮಾರು 20 ದಿನಗಳವರೆಗೆ ಪ್ರತಿ ದಿನ 1 tmcಯಂತೆ 20 tmc ನೀರು ಬಿಡಲು ಆದೇಶಿಸಿದ್ದಾರೆ. ನಾರ್ಮಲ್ ವರ್ಷದಲ್ಲಿ ಜೂನ್ ತಿಂಗಳಲ್ಲಿ 9.4 tmc, Julyನಲ್ಲಿ 31.24tmc ನೀರು ಬಿಡಬೇಕಾಗಿದೆ. ಅಂದರೆ ಒಟ್ಟು 40.43 tmc ಬಿಡಬೇಕಾಗಿದೆ. ಇಲ್ಲಿಯವರೆಗೂ 5 tmcಗೂ ಹೆಚ್ಚು ನೀರು ಬಿಡಲು ಸಾಧ್ಯವಾಗಿದೆ. 

ಕಾವೇರಿ ತೀರದ ಸಚಿವರು, ಶಾಸಕರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಜುಲೈ12 ರಂದು ಸಭೆ ನಡೆಸಿ ನೀರು ಬಿಡದೇ ಇರಲು ಮತ್ತು ಸರ್ವಪಕ್ಷ ಸಭೆ ಕರೆಯಲು, CWMA ಮುಂದೆ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿದ್ದೆವು. ಈ ಹಿನ್ನೆಲೆಯಲ್ಲಿ ಇಂದು ಸರ್ವಪಕ್ಷ ಸಭೆ ನಡೆಸಲಾಯಿತು. ಬಿಜೆಪಿ, ಜೆಡಿಎಸ್, ರೈತ ಸಂಘದವರು, ಕಾನೂನು ತಂಡದ ಮುಖ್ಯಸ್ಥರಾದ ಮೋಹನ್ ಕಾತರಕಿ ಅವರು ಸೇರಿ ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಮ್ಮ ಕಾವೇರಿ ತೀರದ ಜಲಾಶಯಗಳಲ್ಲಿ 63 % ಮಾತ್ರ ಭರ್ತಿ ನೀರು ಆಗಿದೆ. ಕಬಿನಿ ಜಲಾಶಯ ಭರ್ತಿ ಯಾಗಿದ್ದು, ಕಳೆದ ಎರಡು ದಿನ 20 ಸಾವಿರ, 19 ಸಾವಿರ ಹಾಗೂ ಇಂದು 13 ಸಾವಿರ ಕ್ಯೂಸೆಕ್ಸ್ ನೀರು ಹರಿದು ಹೋಗಿದೆ. ಜಲಾಶಯದ ಸುರಕ್ಷತೆಗಾಗಿ ಶೇಖರಿಸಿಡಲು ಸಾಧ್ಯವಾಗದ ನೀರು ಮಾತ್ರ ಹರಿದುಹೋಗಿದೆ. 

ವಕೀಲರ ತಂಡದ ಸಲಹೆ ಪ್ರಕಾರ ಹೆಚ್ಚು ಮಳೆ ಬಿದ್ದರೆ ಮಾತ್ರ ಮಳೆ ಪ್ರಮಾಣಕ್ಕೆ ತಕ್ಕಂತೆ, CWMC ಆದೇಶದ ಪ್ರಕಾರ ಪೂರ್ತಿ ನೀರು ಹರಿಸಬಹುದು. ಇಲ್ಲದಿದ್ದರೆ ಕೇವಲ 8 ಸಾವಿರ ಕ್ಯೂಸೆಕ್ಸ್ ನೀರು ಬಿಡಬೇಕಾಗುತ್ತದೆ ಇದರ ಜೊತೆಗೆ ಮೇಲ್ಮನವಿ ಹಾಕೋಣ. ನಾವು ಮೊಂಡಾಟ ಆಡ್ತೀವಿ ಎಂದು CWMC ಗೆ ಅನ್ನಿಸಬಾರದು ಎನ್ನುವ ಸಲಹೆ ಬಂದಿದೆ.