ನಾಳೆ ಬೆಳಗಾವಿಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಬೆಳಗಾವಿ: ಭಾರತೀಯ ಹವಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ನಾಳೆ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದ್ದು, ಮಕ್ಕಳ ಹಿತದೃಷ್ಟಿಯಿಂದ ನಾಳೆ ಖಾನಾಪುರ ಹಾಗೂ ಬೆಳಗಾವಿ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ರಜೆ ನೀಡಿ ಆದೇಶ ನೀಡಿದ್ದಾರೆ.
ಬೆಳಗಾವಿ ಮತ್ತು ಖಾನಾಪೂರ ತಾಲ್ಲೂಕುಗಳಾದ್ಯಂತ ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ (12 ನೇ ತರಗತಿವರೆಗೆ) ಮತ್ತು ಅಂಗನವಾಡಿಗಳಿಗೆ ಮುಂಜಾಗೃತ ಕ್ರಮವಾಗಿ ನಾಳೆ ರಜೆ ಘೋಷಿಸಿ ಆದೇಶಿಸಿದೆ.
ಸಾರ್ವಜನಿಕ ಶಿಕ್ಷಣ, ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ರವರು ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಹಾಗೂ ಈ ರಜಾ ಅವಧಿಯನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕ ಮಾಡಿಕೊಳ್ಳಲು ಸೂಚಿಸಲಾಗಿದೆ.