ಕಾರವಾರ: ಜುಲೈ 25ರಂದು ಉತ್ತರ ಕನ್ನಡ ಜಿಲ್ಲೆಯ ಕೆಲ ತಾಲೂಕಿನ ಶಾಲೆಗಳಿಗೆ ರಜೆ

ಕಾರವಾರ: ಜುಲೈ 25ರಂದು ಉತ್ತರ ಕನ್ನಡ ಜಿಲ್ಲೆಯ ಕೆಲ ತಾಲೂಕಿನ ಶಾಲೆಗಳಿಗೆ ರಜೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಹೆಚ್ಚಾಗಿರುವ ಮುನ್ಸೂಚನೆ ಇರುವ ಕಾರಣ ಜುಲೈ 25ರಂದು ಕೆಲವು ತಾಲೂಕುಗಳ ಶಾಲಾಗಳಿಗೆ ರಜೆ ಘೋಷಣೆ ಮಾಡಲಾಗಿದೆ. 

ಜಿಲ್ಲೆಯಲ್ಲಿ ಜುಲೈ 24ರ ಮಧ್ಯಾಹ್ನ 1 ಗಂಟೆಯಿಂದ ಜುಲೈ 26ರವರೆಗೆ ಆರೆಂಜ್ ಅಲರ್ಟ್ ಇದ್ದು ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ದಾಂಡೇಲಿ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಶಾಲೆಗಳು, ಪದವಿ ಪೂರ್ವ ಕಾಲೇಜು ಹಾಗೂ ಐಟಿಐ ಮತ್ತು ಡಿಪ್ಲೊಮಾ ಕಾಲೇಜುಗಳಿಗೆ ಜುಲೈ 25ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಆದೇಶಿಸಿದ್ದಾರೆ.