ಧಾರವಾಡ : ಮತ ಚಲಾಯಿಸಲು ಮೇ.7 ರಂದು ಸರ್ಕಾರಿ ನೌಕರರಿಗೆ ವೇತನ ಸಹಿತ ರಜೆ

ಧಾರವಾಡ : ಮತ ಚಲಾಯಿಸಲು ಮೇ.7 ರಂದು ಸರ್ಕಾರಿ ನೌಕರರಿಗೆ ವೇತನ ಸಹಿತ ರಜೆ

ಧಾರವಾಡ : ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಮೇ 07 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಲೋಕಸಭಾ ಕ್ಷೇತ್ರದ ಧಾರವಾಡ ಜಿಲ್ಲಾ ವ್ಯಾಪ್ತಿಯಲ್ಲಿರುವ ಎಲ್ಲಾ ಸರ್ಕಾರಿ ಕಚೇರಿ, ಶಾಲಾ ಕಾಲೇಜು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಎಲ್ಲಾ ವ್ಯವಹಾರ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಹಾಗೂ ಇತರ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಸಂವಿಧಾನಾತ್ಮಕ ಅಥವಾ ಶಾಸನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ಅನುಕೂಲವಾಗುವಂತೆ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಎಲ್ಲಾ ವ್ಯವಹಾರ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು, ಹಾಗೂ ಇತರ ಸಂಸ್ಥೆಗಳು ಮತದಾನ ದಿನದಂದು ನೌಕರರಿಗೆ ವೇತನ ಸಹಿತ ರಜೆ ನೀಡಬೇಕು. 

ಈ ರಜೆಯು ತುರ್ತು ಸೇವೆಗಳ ಮೇಲೆ ಇರುವ ಸರ್ಕಾರಿ ನೌಕರರಿಗೆ ಅನ್ವಯಿಸುವುದಿಲ್ಲ. ಆದಾಗ್ಯೂ ಕೂಡ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಗುಣವಾಗುವಂತೆ ಸಂಬಂಧಿಸಿದ ಇಲಾಖೆ ಹಾಗೂ ಸಂಘ ಸಂಸ್ಥೆಗಳು ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.