ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು, ಏಮ್ಸ್ ಗೆ ದಾಖಲು

ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು, ಏಮ್ಸ್ ಗೆ ದಾಖಲು

ಇತ್ತೀಚೆಗಷ್ಟೇ ಕೊರೊನಾ ವೈರಸ್‌ನಿಂದ ಚೇತರಿಸಿಕೊಂಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಲ್ಲಿ ಉಸಿರಾಟದ ಸಮಸ್ಯೆಗಳು ಕಂಡುಬಂದ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಅವರನ್ನು ಎದೆಗೆ ಸಂಬಂಧಿಸಿದ ಸೋಂಕಿನ ಚಿಕಿತ್ಸೆಗೆ ಒಳಪಡಿಸಲಾಗಿದೆ ಎನ್ನಲಾಗಿದೆ. 

ಕೊರೊನಾ ವೈರಸ್‌ ಸೋಂಕಿನಿಂದ ಚೇತರಿಸಿಕೊಂಡ ಬಳಿಕ ಕಳೆದ 3-4 ದಿನಗಳಿಂದ ಅಮಿತ್ ಶಾ ತೀವ್ರ ಆಯಾಸ ಮತ್ತು ಮೈ ನೋವಿನಿಂದ ಬಳಲುತ್ತಿದ್ದಾರೆ. ಅವರನ್ನು ಪುನಃ ಕೊರೊನಾ ವೈರಸ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ನೆಗೆಟಿವ್ ವರದಿ ಬಂದಿದೆ. 

ಕೊವಿಡ್ ನಂತರದ ಆರೈಕೆಗಾಗಿ ಅವರನ್ನು ಏಮ್ಸ್‌ಗೆ ದಾಖಲು ಮಾಡಲಾಗಿದೆ. ಇಲ್ಲಿ ಅವರು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದಲೇ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ ಎಂದು ಏಮ್ಸ್ ತಿಳಿಸಿದೆ.