ಹುಬ್ಬಳ್ಳಿ ಬ್ರೇಕಿಂಗ್: ಐಟಿ ಪಾರ್ಕ್ ಶೌಚಾಲಯದಲ್ಲಿ ಸುಟ್ಟು ಕರಕಲಾದ ಶವ ಪತ್ತೆ

ಹುಬ್ಬಳ್ಳಿ: ಸೆಕ್ಯುರಿಟಿ ಗಾರ್ಡ್ ಓರ್ವರು ಭೀಕರವಾಗಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಗರದ ಐಟಿ ಪಾರ್ಕ್‌ನ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಸಂಸ್ಥೆ ನಿಯಮಿತದಲ್ಲಿರುವ ಶೌಚಾಲಯ ಬಳಿ ನಡೆದಿದೆ. ಮೃತ ದುರ್ದೈವಿ ಚನ್ನಮಲ್ಲಯ್ಯ ಶೇಖಯ್ಯ ಹಿರೇಮಠ (44) ಎಂದು ತಿಳಿದು ಬಂದಿದ್ದು, ಇತ ಮೂಲತಃ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದ ನಿವಾಸಿ ಸಧ್ಯ ಹುಬ್ಬಳ್ಳಿಯ ನೇಕಾರ ನಗರದಲ್ಲಿ ಪತ್ನಿ ಹಾಗೂ ಇಬ್ಬರ ಮಕ್ಕಳೊಂದಿಗೆ ವಾಸವಾಗಿದ್ದರು ಎಂದು ತಿಳಿದುಬಂದಿದೆ. ಈತ ಐಟಿ ಪಾರ್ಕ್‌ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ನಿನ್ನೆ ರಾತ್ರಿ ಎಂದಿನಂತೆ ಕೆಲಸಕ್ಕೆ ಬಂದಿದ್ದು, ಇಂದು ತಾನು ಕೆಲಸ ಮಾಡುತ್ತಿದ್ದ ಕಚೇರಿಯ ಶೌಚಾಲಯದಲ್ಲಿ ಸುಟ್ಟ ಸ್ಥಿತಿಯಲ್ಲಿ ಆತನ ಶವ ಪತ್ತೆಯಾಗಿದೆ. ಸ್ಥಳಕ್ಕೆ ಹಿರಿಯ ಉಪನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆದಿದ್ದು, ಈ ಕುರಿತು ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಘಟನೆಗೆ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ. ಇನ್ನಷ್ಟೇ ಪೊಲೀಸ್ ತನಿಖೆಯಿಂದ ತಿಳಿಯಬೇಕಾಗಿದೆ.