ಹುಬ್ಬಳ್ಳಿ: ಎರಡು ಬೈಕ್‌ಗಳ ಮಧ್ಯೆ ಡಿಕ್ಕಿ; ಓರ್ವ ಸಾವು

ಹುಬ್ಬಳ್ಳಿ: ಎರಡು ಬೈಕ್‌ಗಳ ಮಧ್ಯೆ ಡಿಕ್ಕಿ; ಓರ್ವ ಸಾವು

ಹುಬ್ಬಳ್ಳಿ: ಎರಡು ಬೈಕ್‌ಗಳ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸಾವರನೊಬ್ಬ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ನವನಗರ ಬಳಿಯ ಕುವೆಂಪು ಕ್ರಾಸ್‌ನಲ್ಲಿ ಗುರುವಾರ ರಾತ್ರಿ ನಡೆದಿದೆ. ಮೃತಪಟ್ಟವನನ್ನು ನವನಗರದ ನಿವಾಸಿ ಶಿವಪುತ್ರಪ್ಪ (40) ಎಂದು ಗುರುತಿಸಲಾಗಿದೆ. ಈತ ಗುರುವಾರ ರಾತ್ರಿ ಮನೆಗೆ ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ಮತ್ತೋರ್ವ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಕಿಮ್ಸ್ ನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ಸಂಬಂಧ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.