ಹುಬ್ಬಳ್ಳಿ: ನಾಯಕರ ನೇತೃತ್ವದಲ್ಲಿ ಸಭೆ: ಪಕ್ಷ ಸಂಘಟನೆಯ ಬಗ್ಗೆ ರಾಹುಲ್ ಗಾಂಧಿ ಚರ್ಚೆ!

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ರಾಹುಲ್ ಗಾಂಧಿ ಸ್ಥಳೀಯ ಮುಖಂಡರ ಹಾಗೂ ರಾಜ್ಯದ ನಾಯಕರ ಜೊತೆಗೆ ರಾಜ್ಯ ರಾಜಕಾರಣದ ಕುರಿತು ಸಭೆ ನಡೆಸುತ್ತಿದ್ದಾರೆ.
ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸುತ್ತಿರುವ ರಾಹುಲ್ ಗಾಂಧಿ ರಾಜ್ಯದಲ್ಲಿ ಮತ್ತಷ್ಟು ಪಕ್ಷವನ್ನು ಬಲಪಡಿಸುವ ಕುರಿತು ಸಮಾಲೋಚನೆ ನಡೆಸುತ್ತಿದ್ದಾರೆ.
ಈಗಾಗಲೇ ಕೆಪಿಸಿಸಿ ಮುಖಂಡರ ಜೊತೆಗೆ ಸಭೆ ನಡೆಸುತ್ತಿರುವ ರಾಹುಲ್ ಗಾಂಧಿ ಪಕ್ಷ ಸಂಘಟನೆಯ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ.