ಹುಬ್ಬಳ್ಳಿ: ರಾಷ್ಟ್ರೀಕೃತ ಬ್ಯಾಂಕ್ ಖಾಸಗೀಕರಣ! ರಸ್ತೆಗಿಳಿದ ಬ್ಯಾಂಕ್ ಸಿಬ್ಬಂದಿ

ಹುಬ್ಬಳ್ಳಿ: ರಾಷ್ಟ್ರೀಕೃತ ಬ್ಯಾಂಕ್‌ಗಳನ್ನು ಕೇಂದ್ರ ಸರ್ಕಾರ ಖಾಸಗೀಕರಣ ಮಾಡುತ್ತಿರುವ ಹಿನ್ನೆಲೆಯಲ್ಲಿ ಯೂನಿಯನ್ ಬ್ಯಾಂಕ್ ಸೇರಿದಂತೆ, ರಾಷ್ಟ್ರೀಕೃತ ಬ್ಯಾಂಕ್ ಸಿಬ್ಬಂದಿ ನಗರದ ಸ್ಟೇಷನ್ ರಸ್ತೆಯಲ್ಲಿರುವ ಯೂನಿಯನ್ ಬ್ಯಾಂಕ್ ಮುಂದೆ ಪ್ರತಿಭಟನೆ ಮಾಡಿದರು. ಖಾಸಗೀಕರಣವನ್ನು ಹಿಂಪಡೆಯಬೇಕೆಂದು ಎರಡು ದಿನಗಳ ಕಾಲ ಬ್ಯಾಂಕ್ ಬಂದ್ ಮಾಡಿ ಮುಷ್ಕರ ಹಮ್ಮಿಕೊಂಡಿದ್ದು. ಬ್ಯಾಂಕ್‌ಗಳನ್ನು ಖಾಸಗೀಕರಣ ಮಾಡಿದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.