ಬೀದಿ ನಾಯಿ ಕಚ್ಚಿದರೆ ಊಟ ಹಾಕಿದವರೇ ಜವಾಬ್ದಾರರು: ಸುಪ್ರೀಂ ಕೋರ್ಟ್

ಬೀದಿ ನಾಯಿ ಕಚ್ಚಿದರೆ ಊಟ ಹಾಕಿದವರೇ ಜವಾಬ್ದಾರರು: ಸುಪ್ರೀಂ ಕೋರ್ಟ್

ನವದೆಹಲಿ: ಇತ್ತೀಚೆಗೆ ಬೀದಿ ನಾಯಿಗಳ ಅಟ್ಟಹಾಸದಿಂದ ಸಂಭವಿಸುತ್ತಿರುವ ಸಾವುಗಳ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಇದಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಹೊಸ ಆದೇಶವೊಂದನ್ನು ನೀಡಿದೆ. ಬೀದಿ ನಾಯಿಗಳಿಗೆ ಆಹಾರ ನೀಡುವವರು ಅದರ ಲಸಿಕೆ ಜವಾಬ್ದಾರಿಯನ್ನೂ ತೆಗೆದುಕೊಳ್ಳಬೇಕು. ಇಲ್ಲವಾದಲ್ಲಿ ಆ ನಾಯಿಯಿಂದ ಆಗುವ ಅನಾಹುತಗಳಿಗೆ ಆಹಾರ ನೀಡಿದವರೇ ಹೊಣೆಗಾರರು ಎಂದು ಸುಪ್ರೀಂ ಕೋರ್ಟ್ ಹೇಳಿದೆ. 

ಜನರ ಸುರಕ್ಷತೆ ಮತ್ತು ಪ್ರಾಣಿಗಳ ಹಕ್ಕುಗಳ ನಡುವೆ ಸಮತೋಲನ ಕಾಯ್ದುಕೊಳ್ಳಬೇಕಾದ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. “ನಮ್ಮ ದೇಶದಲ್ಲಿ ಹೆಚ್ಚಿನವರು ನಾಯಿ ಪ್ರಿಯರು. ನಾನು ಕೂಡ ನಾಯಿಗಳಿಗೆ ಆಹಾರ ನೀಡುತ್ತೇನೆ. ಆದರೆ, ಜನರು ನಾಯಿಗಳಿಗೆ ಆಹಾರ ಹಾಕುವುದರ ಜೊತೆಗೆ ಅವುಗಳ ಕಾಳಜಿ, ಜವಾಬ್ದಾರಿಯನ್ನೂ ತೆಗೆದುಕೊಳ್ಳಬೇಕು ಎಂದು ನ್ಯಾಯಮೂರ್ತಿ ಸಂಜೀವ್ ಖನ್ನಾ ಹೇಳಿದ್ದಾರೆ. ಬೀದಿನಾಯಿ ಸಮಸ್ಯೆಯನ್ನು ಪರಿಹರಿಸಲು ತರ್ಕಬದ್ಧ ಪರಿಹಾರವನ್ನು ಕಂಡುಹಿಡಿಯಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ವಿಚಾರಣೆಯನ್ನು ಸೆಪ್ಟೆಂಬರ್ 28ಕ್ಕೆ ಮುಂದೂಡಲಾಗಿದೆ. ಈ ವಿಷಯದಲ್ಲಿ ಉತ್ತರಗಳನ್ನು ಸಲ್ಲಿಸಲು ಕಕ್ಷಿದಾರರಿಗೆ ತಿಳಿಸಿದೆ.