ಬೆಂಗಳೂರು : ಚನ್ನಪಟ್ಟಣ ಗೆಲುವಿಗಾಗಿ ಬಿಜೆಪಿ ಕಚೇರಿಯಲ್ಲಿಂದು ಮೈತ್ರಿ ನಾಯಕರ ಮಹತ್ವದ ಸಭೆ

ಬೆಂಗಳೂರು : ಚನ್ನಪಟ್ಟಣ ಬೈ ಎಲೆಕ್ಷನ್ ಮೈತ್ರಿ ನಾಯಕರಿಗೆ ದೊಡ್ಡ ಸವಾಲು. ಬಿಜೆಪಿಯಿಂದ ತೊರೆದು ಸಿಪಿ ಯೋಗೇಶ್ವರ್ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಹಿನ್ನೆಲೆ ಅವರನ್ನ ಸೋಲಿಸಲು ಮೈತ್ರಿ ನಾಯಕರು ಇಂದು ಮಹತ್ವದ ಸಭೆ ನಡೆಸಲಿದ್ದಾರೆ.
ಚನ್ನಪಟ್ಟಣ ಉಪಚುನಾವಣೆಯಲ್ಲಿ ಗೆಲುವಿಗಾಗಿ ಮೈತ್ರಿ ನಾಯಕರಿಂದ ತಂತ್ರಗಾರಿಕೆ ರೂಪಿಸಲು ಇಂದು ಮಧ್ಯಾಹ್ನ 3.30 ಕ್ಕೆ ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಹತ್ವದ ಸಭೆ ಕರೆಯಲಾಗಿದೆ.ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮತ್ತು ಜೆಡಿಎಸ್ ಶಾಸಕಾಂಗ ನಾಯಕ ಸುರೇಶ್ ಬಾಬು ,ಬಿಜೆಪಿ ಶಾಸಕ ಡಾ.ಸಿ.ಎನ್. ಅಶ್ವಥ್‌ನಾರಾಯಣ ಸೇರಿ ಕ್ಷೇತ್ರದ ಪ್ರಮುಖ ಬಿಜೆಪಿ ನಾಯಕರು ಭಾಗಿಯಾಗಲಿದ್ದಾರೆ.
ಕಾಂಗ್ರೆಸ್ ಸೋಲಿಸಲು ಅಗತ್ಯ ತಂತ್ರಗಾರಿಕೆಗಳ ಬಗ್ಗೆ ಸಭೆಯಲ್ಲಿ ಸಮಾಲೋಚನೆ ನಡೆಸಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪರ ಇಡೀ ಸಚಿವ ಸಂಪುಟ ಸಚಿವರುಗಳು ಚನ್ನಪಟ್ಟಣದಲ್ಲಿ ಪ್ರಚಾರಕ್ಕೆ ಇಳಿಯಲಿದ್ದಾರೆ ಅವರಿಗೆ ಸಡ್ಡು ಹೊಡೆಯುವ ಮಟ್ಟದಲ್ಲಿ ಎನ್ ಡಿಎ ನಾಯಕರು ಪ್ರಚಾರ ಮಾಡಬೇಕಿದೆ ಈ ನಿಟ್ಟಿನಲ್ಲಿ ಅಬ್ಬರದ ಪ್ರಚಾರ ಜೊತೆಗೆ ಕ್ಷೇತ್ರದಲ್ಲಿ ಒಂದಿಷ್ಟು ನಾಯಕರಿಗೆ ಜವಾಬ್ದಾರಿ ನೀಡುವ ಬಗ್ಗೆ ಹಾಗೇ ಗೆಲುವಿಗೆ ಬೇಕಾದ ತಂತ್ರಗಾರಿಕೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ.