ಮಾಸ್ಕ್ ತೆಗೆಯದಂತೆ ಸುಧಾಕರ ಮನವಿ : XE ಆತಂಕ ಕರ್ನಾಟಕದಲ್ಲಿಯೂ ಹೈ ಅಲರ್ಟ್

ಬೆಂಗಳೂರು: ಕೋವಿಡ್ ಕರಿನೆರಳು ಕಮರಿದೆ ಎನ್ನುವಷ್ಟರಲ್ಲಿ ಮತ್ತೆ ನಾಲ್ಕನೇ ಅಲೆ ಆತಂಕ ಶುರುವಾಗಿದೆ. ಇದೇ ಸಂದರ್ಭದಲ್ಲಿ ರಾಜ್ಯದ ಜನತೆಗೆ ಮನವಿ ಮಾಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ ಎಂದಿನಂತೆ ಮಾಸ್ಕ್ ಕಡ್ಡಾಯ, ಮಾಸ್ಕ್ ಹಾಕಿಕೊಂಡೆ ಸಂಚರಿಸಿ ಎಂದಿದ್ದಾರೆ. ಹೌದು ಕೋವಿಡ್ ನಾಲ್ಕನೇ ಅಲೆಯನ್ನ ತಡೆಯಲು ಜನರು ಸರ್ಕಾರದೊಂದಿಗೆ ಕೈ ಜೋಡಿಸಬೇಕಿದ್ದು, ಎಂದಿನಂತೆ ಮಾಸ್ಕ್ ಗಳನ್ನು ಕಡ್ಡಾಯವಾಗಿ ಹಾಕಿಕೊಳ್ಳಬೇಕು ಎಂದು ಕೊವಿಡ್ ತಾಂತ್ರಿಕ ಸಲಹಾ ಸಮಿತಿ ಜತೆ ನಡೆದ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಯಾರಿಂದಲೂ ಉದಾಸೀನ ವರ್ತನೆ ಬೇಡ. ಬೂಸ್ಟರ್ ಡೋಸ್ ಹಾಕಿಸಿಕೊಳ್ಳಲು ನಿರ್ಲಕ್ಷ್ಯಬೇಡ. ಬಾಕಿ ಇರುವವರು 2, 3ನೇ ಡೋಸ್ ಕೂಡಲೇ ಹಾಕಿಸಿಕೊಳ್ಳಿ ಎಂದರು. ದಕ್ಷಿಣ ಕೊರಿಯಾ, ಹಾಂಕಾಂಗ್, ಬ್ರಿಟನ್, ಜರ್ಮನಿ ಮತ್ತು ಚೀನಾ ಸೇರಿ 8 ದೇಶಗಳಿಂದ ಬರುವವರಿಗೆ ಶೀಘ್ರವೇ ಮಾರ್ಗಸೂಚಿ ಹೊರಡಿಸುತ್ತೇವೆ. ಎಂಟು ದೇಶಗಳಲ್ಲಿ ರೂಪಾಂತರಿ XE ಸೋಂಕು ಹೆಚ್ಚಾಗುತ್ತಿದೆ. ದೇಶದಲ್ಲೂ ರೂಪಾಂತರಿ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಜಾಗೃತರಾಗಿರಿ ಎಂದಿದ್ದಾರೆ.