IPL 2022ರ 50 ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದವರು, ವಿಕೆಟ್ ಪಡೆದವರು ಯಾರು?

IPL 2022ರ 50 ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದವರು, ವಿಕೆಟ್ ಪಡೆದವರು ಯಾರು?

ಮುಂಬೈ: ಐಪಿಎಲ್ 2022ರಲ್ಲಿ 50 ಪಂದ್ಯಗಳ ಮುಕ್ತಾಯದ ನಂತರ ರಾಜಸ್ಥಾನ್ ರಾಯಲ್ಸ್‌ ಆರಂಭಿಕ ಆಟಗಾರ ಜೋಸ್ ಬಟ್ಲರ್ 588 ರನ್‌ಗಳೊಂದಿಗೆ ಇದುವರೆಗೆ ಪಂದ್ಯಾವಳಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅವರ ನಂತರ ಲಕ್ನೋ ಸೂಪರ್ ಜೈಂಟ್ಸ್‌ ತಂಡದ ನಾಯಕ ಕೆಎಲ್ ರಾಹುಲ್ (451 ರನ್‌) ಮತ್ತು ಪಂಜಾಬ್ ಕಿಂಗ್ಸ್ ತಂಡದ ಆರಂಭಿಕ ಆಟಗಾರ ಶಿಖರ್ ಧವನ್ (369) ಇದ್ದಾರೆ. 


ಇನ್ನು ಅತಿಹೆಚ್ಚು ವಿಕೆಟ್‌ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಲೆಗ್ ಸ್ಪಿನ್ನರ್ ಯಜುವೇಂದ್ರ ಚಾಹಲ್ (19 ವಿಕೆಟ್) ಇದ್ದಾರೆ. ನಂತರ (ಎರಡನೇ) ಸ್ಥಾನದಲ್ಲಿ ಸ್ಪಿನ್ನರ್ ಕುಲ್ದೀಪ್ ಯಾದವ್ (18 ವಿಕೆಟ್) ಇದ್ದಾರೆ.