ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಅಂದು ಎಲ್ಲರಿಗೂ ರಜೆ ಅಗತ್ಯ

ಬೆಂಗಳೂರು : ಜನವರಿ 22 ರಂದು ಎಲ್ಲರ ಚಿತ್ತ ಅಯೋಧ್ಯೆಯತ್ತ ಎಂಬಂತಿರುವಾಗ ಅಂದು ಮರ್ಯಾದಾ ಪುರುಷೋತ್ತಮನಾದ ಶ್ರೀ ರಾಮನ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಲು ಹಾಗೂ ಎಲ್ಲರೂ ರಾಮನ ಆರಾಧನೆಯಲ್ಲಿ ತೊಡಗಿಕೊಳ್ಳಲು ಅನುವಾಗುವಂತೆ ಸರ್ಕಾರ ರಜೆ ಘೋಷಿಸಬೇಕು ಅಂತಾ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯನವರಿಗೆ ಬರೆದ ಪತ್ರವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ ಅವರು, ಸರ್ಕಾರ ಜನವರಿ 22 ರಂದು ಸರ್ಕಾರಿ ನೌಕರರು ಸೇರಿದಂತೆ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು ಕೇಳಿಕೊಂಡಿದ್ದಾರೆ.