ಬೆಂಗಳೂರು : ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ SC/ST ವಿದ್ಯಾರ್ಥಿಗಳ ಪ್ರೋತ್ಸಾಹ ಧನ 1 ರಿಂದ 2 ಲಕ್ಷಕ್ಕೆ ಹೆಚ್ಚಳ

ಬೆಂಗಳೂರು : IIT/IIM/IISC /NIT ಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ SC/ST ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು 1 ರಿಂದ 2 ಲಕ್ಷಕ್ಕೆ ಹೆಚ್ಚಳ ಮಾಡಿ ಸರ್ಕಾರವು ಆದೇಶ ಹೊರಡಿಸಿದ್ದು, ಇದು ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳ ಹೆಚ್ಚಿನ ಶೈಕ್ಷಣಿಕ ಸಾಧನೆಗೆ ಕಾರಣವಾಗಲಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ ಹೆಚ್ ಸಿ ಮಹದೇವಪ್ಪನವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇನ್ನು ಪಿಯುಸಿ ಪರೀಕ್ಷೆಯಲ್ಲಿ 95ಕ್ಕೂ ಹೆಚ್ಚಿನ ಅಂಕಗಳನ್ನು ಪಡೆದು, ನೀಟ್ ಪ್ರವೇಶ ಪರೀಕ್ಷೆಯ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ದೊರಕದೇ ಮ್ಯಾನೇಜ್ ಮೆಂಟ್ ಕೋಟಾದಡಿ ಎಂಬಿಬಿಎಸ್ ಕೋರ್ಸ್ ಗೆ ಸೀಟು ಪಡೆದುಕೊಂಡ ಪರಿಶಿಷ್ಟ ಜಾತಿಯ ಮಕ್ಕಳಿಗೆ 25 ಲಕ್ಷ ರೂಪಾಯಿಗಳ ಶುಲ್ಕ ಧನವನ್ನು ಒದಗಿಸಲು ಸರ್ಕಾರ ತೀರ್ಮಾನಿಸಿದೆ.
ಎಂಬಿಬಿಎಸ್ ಪದವಿಯನ್ನು ಪಡೆಯುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಮೊದಲ ವರ್ಷ 60% ಗೂ ಹೆಚ್ಚಿನ ಅಂಕಗಗಳನ್ನು ಪಡೆದು ಉತ್ತೀರ್ಣ ರಾದರೆ ಅವರಿಗೆ ಅವರಿಗೆ ಮತ್ತೆ 25 ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನವನ್ನು ನೀಡಲಾಗುವುದು.
ಶಿಕ್ಷಣವೇ ಸಮಾಜವನ್ನು ಬದಲಿಸುವ ಕೀಲಿಕೈ ಎಂಬ ಅಂಶವನ್ನು ಮನಗಂಡು ಈ ಒಂದು ಮಹತ್ವದ ಘೋಷಣೆಯನ್ನು ಸರ್ಕಾರವು ಮಾಡಿದ್ದು, ಇದರಿಂದ ಉನ್ನತ ಶಿಕ್ಷಣ ಮಾಡಬೇಕೆಂಬ ವಿದ್ಯಾರ್ಥಿಗಳ ಕನಸ್ಸು ನನಸಾಗಲಿದೆ ಎಂದು ಸಚಿವ ಹೆಚ್ ಸಿ ಮಹದೇವಪ್ಪ ಅಭಿಪ್ರಾಯ ಪಟ್ಟಿದ್ದಾರೆ.