ಹಿಮಾಚಲ ಪ್ರದೇಶದಲ್ಲಿ ನಿರಂತರ ಮಳೆ: 69 ಜನ ಸಾವು

ಹಿಮಾಚಲ ಪ್ರದೇಶದಲ್ಲಿ ನಿರಂತರ ಮಳೆ: 69 ಜನ ಸಾವು

ಹಿಮಾಚಲ ಪ್ರದೇಶ: ಕಳೆದ ಹಲವಾರು ದಿನಗಳಿಂದ ಹಿಮಾಚಲ ಪ್ರದೇಶದ ಜಿಲ್ಲೆಗಳಲ್ಲಿ ಭೀಕರ ಮಳೆಯಾಗುತ್ತಿದೆ. ಮಳೆ ಪರಿಣಾಮ ಜನವಸತಿ ಪ್ರದೇಶದಲ್ಲಿ ಪ್ರವಾಹ ಉಂಟಾಗಿದೆ. ನಿರಂತರ ಮಳೆ ಹಾಗೂ ಪ್ರವಾಹದ ಪರಿಣಾಮ ಜೂನ್ 20 ರಿಂದ ಜುಲೈ 3 ರವರೆಗೆ ಕನಿಷ್ಠ 69 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಜೊತೆಗೆ 400 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಆಸ್ತಿ ಹಾನಿಯಾಗಿದೆ. 

ಬಲವಾದ ಪ್ರವಾಹದಲ್ಲಿ ಹಲವಾರು ಕಟ್ಟಡಗಳು ಕುಸಿದು ವಾಹನಗಳು ಕೊಚ್ಚಿ ಹೋಗಿರುವುದರಿಂದ ಮಂಡಿ ಜಿಲ್ಲೆಯಲ್ಲಿ ಅತ್ಯಂತ ಹಾನಿಗೊಳಗಾಗಿದೆ. ನಮ್ಮ ವ್ಯವಸ್ಥೆಯಲ್ಲಿ ಪ್ರವೇಶಿಸಿದಂತೆ ಇಲ್ಲಿಯವರೆಗೆ 400 ಕೋಟಿ ರೂ.ಗಳಿಗೂ ಹೆಚ್ಚು ನಷ್ಟವನ್ನು ನಾವು ದಾಖಲಿಸಿದ್ದೇವೆ. ಆದರೆ ನಿಜವಾದ ಹಾನಿ ಇನ್ನೂ ಹೆಚ್ಚಾಗಿರಬಹುದು” ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಕಂದಾಯ ಇಲಾಖೆಯ ವಿಶೇಷ ಕಾರ್ಯದರ್ಶಿ ಡಿ.ಸಿ. ರಾಣಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.