INDvsAUS WTC Final: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ

ಲಂಡನ್: ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ಟೆಸ್ಟ್ ವಿಶ್ವ ಚಾಂಪಿಯನ್‌ಷಿಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಕಾಂಗರೂ ಪಡೆ ಇದೇ ಮೊದಲ ಬಾರಿ ಫೈನಲ್‌ಗೆ ಅರ್ಹತೆ ಪಡೆದಿದ್ದು, ಟೀಂ ಇಂಡಿಯಾ ಬ್ಯಾಕ್ ಟು ಬ್ಯಾಕ್ ಫೈನಲ್ ಪ್ರವೇಶಿಸಿದ ಸಾಧನೆ ಮೆರೆದಿದೆ. ಇತ್ತಂಡಗಳು ತಮ್ಮ ಮೊದಲ ಟ್ರೋಫಿಗಾಗಿ ಜಿದ್ದಾಜಿದ್ದಿನ ಪೈಪೋಟಿ ನಡೆಸಲಿವೆ.
ಮೋಡ ಮುಚ್ಚಿದ ವಾತಾವರಣ ಮತ್ತು ಹಸಿರು ಹುಲ್ಲುಹಾಸನ್ನು ಹೊದ್ದಿ ಮಲಗಿರುವ ಪಿಚ್ ವೇಗದ ಬೌಲರ್‌ಗಳಿಗೆ ನೆರವಾಗುತ್ತದೆ. ಇದೇ ಕಾರಣಕ್ಕೆ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಮಾಡುವ ಆಯ್ಕೆ ಮಾಡಿಕೊಂಡಿದ್ದಾರೆ. ತಂಡದಲ್ಲಿ ಏಕೈಕ ಸ್ಪಿನ್ನರ್ ಆಗಿ ರವೀಂದ್ರ ಜಡೇಜಾ ಅವರನ್ನು ತೆಗೆದುಕೊಂಡು ಆರ್ ಅಶ್ವಿನ್ ಅವರನ್ನು ಕೈಬಿಡಲಾಗಿದೆ. ಅವರ ಜಾಗದಲ್ಲಿ ಫಾಸ್ಟ್ ಬೌಲಿಂಗ್ ಆಲ್‌ರೌಂಡರ್ ಶಾರ್ದುಲ್ ಠಾಕೂರ್ ಕಣಕ್ಕಿಳಿದಿದ್ದು, ಮೂವರು ವೇಗಿಗಳನ್ನು ಆಡಿಸಲಾಗಿದೆ.