IND vs SA 3rd ODI: ಟಾಸ್ ಗೆದ್ದ ಟೀಂ ಇಂಡಿಯಾ ಬೌಲಿಂಗ್ ಆಯ್ಕೆ- ತಂಡದಲ್ಲಿ ನಾಲ್ಕು ಪ್ರಮುಖ ಬದಲಾವಣೆ

IND vs SA 3rd ODI: ಟಾಸ್ ಗೆದ್ದ ಟೀಂ ಇಂಡಿಯಾ ಬೌಲಿಂಗ್ ಆಯ್ಕೆ- ತಂಡದಲ್ಲಿ ನಾಲ್ಕು ಪ್ರಮುಖ ಬದಲಾವಣೆ

ಕೇಪ್‌ಟೌನ್: ದಕ್ಷಿಣ ಆಫ್ರಿಕಾ ವಿರುದ್ಧದ ಕೊನೆಯ ಹಾಗೂ ಮೂರನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಕೆ.ಎಲ್.ರಾಹುಲ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಕೇಪ್‌ಟೌನ್‌‌ನ ನ್ಯೂಲ್ಯಾಂಡ್ಸ್ ಕ್ರೀಡಾಂಗಣದಲ್ಲಿ ಇಂದಿನ ಪಂದ್ಯ ನಡೆಯಲಿದ್ದು, ಭಾರತ ತಂಡದಲ್ಲಿ ಪ್ರಮುಖ ನಾಲ್ಕು ಬದಲಾವಣೆ ತರಲಾಗಿದೆ. ಕೆ.ಎಲ್ ರಾಹುಲ್ ನಾಯಕತ್ವದಲ್ಲಿ ಕಣಕ್ಕಿಳಿದು ಮೊದಲೆರಡು ಪಂದ್ಯಗಳಲ್ಲಿ ಸೋತಿರುವ ಟೀಂ ಇಂಡಿಯಾ ಇದೀಗ ಮೂರನೇ ಏಕದಿನ ಪಂದ್ಯದಲ್ಲಿ ಬೆಂಚ್ ಕಾಯುತ್ತಿದ್ದ ಆಟಗಾರರಿಗೆ ಅವಕಾಶ ನೀಡಿದೆ. ಇಂದಿನ ಪಂದ್ಯ ಸೂರ್ಯಕುಮಾರ್ ಯಾದವ್, ಜಯಂತ್ ಯಾದವ್, ಕನ್ನಡಿಗ ಪ್ರಸಿದ್ಧ ಕೃಷ್ಣ ಮತ್ತು ದೀಪಕ್ ಚಹಾರ್‌ಗೆ ಪ್ಲೇಯಿಂಗ್ ಇಲೆವೆನ್‌ನಲ್ಲಿ ಅವಕಾಶ ನೀಡಲಾಗಿದೆ. ಇನ್ನು ಆರ್‌.ಅಶ್ವಿನ್, ಶಾರ್ದೂಲ್ ಠಾಕೂರ್, ವೆಂಕಟೇಶ್ ಅಯ್ಯರ್ ಮತ್ತು ಭುವನೇಶ್ವರ್ ಕುಮಾರ್‌ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಭಾರತ ತಂಡ ಹೀಗಿದೆ: ಶಿಖರ್ ಧವನ್, ಕೆ.ಎಲ್.ರಾಹುಲ್ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ ( ವಿಕೆಟ್‍ ಕೀಪರ್), ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಜಯಂತ್ ಯಾದವ್, ದೀಪಕ್ ಚಹಾರ್, ಜಸ್ಪ್ರೀತ್ ಬುಮ್ರಾ, ಯಜುವೇಂದ್ರ ಚಾಹಲ್, ಪ್ರಸಿದ್ಧ ಕೃಷ್ಣ.