IND vs SL: ಬಿಸಿಸಿಐನಿಂದ ಪರಿಷ್ಕೃತ ವೇಳಾಪಟ್ಟಿ ಪ್ರಕಟ- ಬೆಂಗಳೂರಿನಲ್ಲಿ ಡೇ-ನೈಟ್ ಟೆಸ್ಟ್

IND vs SL: ಬಿಸಿಸಿಐನಿಂದ ಪರಿಷ್ಕೃತ ವೇಳಾಪಟ್ಟಿ ಪ್ರಕಟ- ಬೆಂಗಳೂರಿನಲ್ಲಿ ಡೇ-ನೈಟ್ ಟೆಸ್ಟ್

ನವದೆಹಲಿ: ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಸೀಮಿತ ಓವರ್‌ಗಳ ಸರಣಿ ಅಂತ್ಯವಾದ ಬಳಿಕ ಭಾರತ ಹಾಗೂ ಶ್ರೀಲಂಕಾ ಮಧ್ಯೆ ಸರಣಿ ಆರಂಭವಾಗಲಿದೆ. ಟಿ20 ಹಾಗೂ ಟೆಸ್ಟ್ ಮಾದರಿಯ ಸರಣಿ ಇದಾಗಿದೆ. ಈ ಸರಣಿಯ ಪರಿಷ್ಕೃತ ವೇಳಾಪಟ್ಟಿಯನ್ನು ಬಿಸಿಸಿಐ ಇಂದು (ಮಂಗಳವಾರ) ಬಿಡುಗಡೆ ಮಾಡಿದೆ. 'ಭಾರತ ತಂಡವು ಶ್ರೀಲಂಕಾ ಮೊದಲಿಗೆ 3 ಪಂದ್ಯಗಳ ಟಿ20 ಸರಣಿಯಲ್ಲಿ ಆಡಲಿದ್ದು, ಅದಾದ ಬಳಿಕ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಭಾಗವಾಗಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮುಖಾಮುಖಿಯಾಗಲಿದೆ ಎಂದು ಬಿಸಿಸಿಐ ಮಾಹಿತಿ ನೀಡಿದೆ. ಲಕ್ನೋದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣ ಫೆಬ್ರವರಿ 24ರಂದು ನಡೆಯಲಿರುವ ಮೊದಲ ಟಿ20 ಪಂದ್ಯದ ಆತಿಥ್ಯ ವಹಿಸಿದ್ದರೆ ಫೆಬ್ರವರಿ 26 ಹಾಗೂ 27ರಂದು ಅಂತಿಮ ಎರಡು ಟಿ20 ಪಂದ್ಯಗಳು ಧರ್ಮಶಾಲಾದಲ್ಲಿ ಆಯೋಜನೆಯಾಗಲಿದೆ. ಟಿ20 ಬಳಿಕ ಎರಡು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಈ ಪೈಕಿ ಡೇ-ನೈಟ್ ಟೆಸ್ಟ್ ಪಂದ್ಯವು ಬೆಂಗಳೂರಿನಲ್ಲಿ ನಡೆಯಲಿದೆ. ಇದು ಭಾರತದಲ್ಲಿ ಆಯೋಜನೆಯಾಗುತ್ತಿರುವ ಮೂರನೇ ಡೇ-ನೈಟ್ ಟೆಸ್ಟ್ ಪಂದ್ಯವಾಗಿರಲಿದೆ.