ಗೆಲುವಿನ ನಾಗಾಲೋಟ ಮುಂದುವರಿಸಿದ ಭಾರತ - ಆಂಗ್ಲರ ವಿರುದ್ಧ ರೋಹಿತ್ ಪಡೆಗೆ ಭರ್ಜರಿ ಜಯ

ವಿಶ್ವಕಪ್ ಏಕದಿನ ಪಂದ್ಯದಲ್ಲಿ ಭಾರತ ಗೆಲುವಿನ ನಾಗಾಲೋಟ ಮುಂದುವರೆಸಿದೆ. ಇಂದು ಉತ್ತರ ಪ್ರದೇಶದ ಲಕ್ನೌನಲ್ಲಿ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ರೋಹತ್ ಪಡೆ ಭರ್ಜರಿ ಗೆಲುವು ಸಾಧಿಸಿದೆ.
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಭಾರತ ತಂಡ 50 ಓವರ್‌ಗಳಲ್ಲಿ ಕೇವಲ 230 ಕ್ಕೆ ರನ್ ಗಳಿಸಿ ಕಡಿಮೆ ಮೊತ್ತವನ್ನು ಇಂಗ್ಲೆಂಡ್‌ಗೆ ನೀಡಿತ್ತು. ಇದನ್ನು ಬೆನ್ನತ್ತಿದ್ದ ಇಂಗ್ಲೆಂಡ್ ಪಡೆ ಮಹಮ್ಮದ್ ಶಮಿ, ಜಸ್ಪ್ರೀತ್ ಬೂಮ್ರಾ ಮಾರಕ ಬೌಲಿಂಗ್‌ಗೆ ಕೇವಲ 129 ಆಲೌಟ್ ಆಗುವ ಮೂಲಕ ಸೋಲನ್ನು ಒಪ್ಪಿಕೊಂಡಿತು.
ಈ ಗೆಲುವಿನೊಂದಿಗೆ ಭಾರತ ಆಡಿರುವ ಆರು ಪಂದ್ಯಗಳಲ್ಲಿ ಗೆಲುವು ಸಾಧಿಸಿ ಅಂಕ ಪಟ್ಟಿಯಲ್ಲಿ ಪ್ರಥಮ ಸ್ಥಾನವನ್ನು ಮತ್ತೆ ಅಲಂಕರಿಸಿದೆ.