ಜೂನ್ 18ರಂದು ದೇಶದ ಪ್ರಥಮ ಸಫಾರಿ EV ಬಸ್ ಉದ್ಘಾಟನೆ

ಬೆಂಗಳೂರು: ದೇಶದ ಪ್ರಥಮ ವಿದ್ಯುತ್ ಚಾಲಿತ ಸಫಾರಿ ಬಸ್‌ನ ಪ್ರಾಯೋಗಿಕ ಸಂಚಾರಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಜೂನ್ 18ರಂದು ಬುಧವಾರ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ಚಾಲನೆ ನೀಡಲಿದ್ದಾರೆ.
ವನ್ಯಜೀವಿ ಸಫಾರಿಗೆ ಪ್ರಸ್ತುತ ಡೀಸೆಲ್ ವಾಹನಗಳನ್ನು ಬಳಸಲಾಗುತ್ತಿದ್ದು, ಈ ವಾಹನಗಳಿಂದ ಹೊರಹೊಮ್ಮುವ ಇಂಗಾಲದ ಪ್ರಮಾಣ ತಗ್ಗಿಸುವ ಉದ್ದೇಶದಿಂದ ಪ್ರಾಯೋಗಿಕವಾಗಿ ದೇಶದಲ್ಲೇ ಮೊದಲ ಬಾರಿಗೆ ವಿದ್ಯುತ್ ಚಾಲಿತ ವಾಹನ ಪರಿಚಯಿಸಲಾಗುತ್ತಿದೆ.
ಬುಧವಾರ ಮಧ್ಯಾಹ್ನ 1.30ಕ್ಕೆ ಬನ್ನೇರುಘಟ್ಟದ ಉದ್ಯಾನದಲ್ಲಿ ಪ್ರಾಯೋಗಿಕವಾಗಿ 22 ಆಸನಗಳ 100 ಕೆ.ವಿ. ಬ್ಯಾಟರಿ ಸಾಮರ್ಥ್ಯದ ಸಫಾರಿ ಬಸ್ ಸಂಚಾರಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ಚಾಲನೆ ನೀಡಲಿದ್ದಾರೆ.