ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ದಾಖಲೆ ಬರೆದ ಭಾರತ

ಹರಾರೆ: ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯ ಭಾಗವಾಗಿ ನಿನ್ನೆ (ಬುಧವಾರ) ನಡೆದ ಮೂರನೇ ಪಂದ್ಯದಲ್ಲಿ ಭಾರತವು ಜಯ ಸಾಧಿಸುವ ಜೊತೆಗೆ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ದಾಖಲೆಯೊಂದನ್ನು ಬರೆದಿದೆ.
ಹರಾರೆಯಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಭಾರತ 23 ರನ್‌ಗಳಿಂದ ಜಿಂಬಾಬ್ವೆಯನ್ನು ಸೋಲಿಸಿ ಐದು ಪಂದ್ಯಗಳ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ. ಇದರೊಂದಿಗೆ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಭಾರತವು 150 ಸಂಪೂರ್ಣ ಗೆಲುವು ದಾಖಲಿಸಿದ ಮೊದಲ ತಂಡವಾಗಿದೆ.