ಏಷ್ಯನ್ ಗೇಮ್ಸ್‌: ಮಹಿಳಾ ಕ್ರಿಕೆಟ್‌ನಲ್ಲಿ ಚಿನ್ನದ ಪದಕ ಗೆದ್ದ ಭಾರತ

ಏಷ್ಯನ್ ಗೇಮ್ಸ್‌: ಮಹಿಳಾ ಕ್ರಿಕೆಟ್‌ನಲ್ಲಿ ಚಿನ್ನದ ಪದಕ ಗೆದ್ದ ಭಾರತ

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡವು ಫೈನಲ್‌ನಲ್ಲಿ ಶ್ರೀಲಂಕಾವನ್ನು 19 ರನ್‌ಗಳಿಂದ ಸೋಲಿಸಿ ಚಿನ್ನದ ಪದಕವನ್ನು ಗೆದ್ದುಕೊಂಡಿದೆ. 

ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 116 ರನ್ ಗಳಿಸಿತ್ತು. ಬಳಿಕ ಬ್ಯಾಟಿಂಗ್ ಮಾಡಿದ ಶ್ರೀಲಂಕಾ ತಂಡವು ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 97 ರನ್‌ ಗಳಿಸಿ ಸೋಲಿಗೆ ಗುರಿಯಾಯಿತು. ಪ್ರಸ್ತುತ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತ ಎರಡು ಚಿನ್ನದ ಪದಕಗಳನ್ನು ಗೆದ್ದಿದೆ.