INDvNZ 3rd T20: ಟಾಸ್ ಗೆದ್ದ ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ಕೆ

INDvNZ 3rd T20: ಟಾಸ್ ಗೆದ್ದ ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ಕೆ

ನೇಪಿಯರ್: ಭಾರತ ವಿರುದ್ಧದ ಟಿ20 ಸರಣಿಯ ಕೊನೆಯ ಹಾಗೂ ಮೂರನೇ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡವು ಬ್ಯಾಟಿಂಗ್ ಆಯ್ದುಕೊಂಡಿದೆ. 

ನೇಪಿಯರ್‌ನ ಮ್ಯಾಕ್ಲೀನ್ ಪಾರ್ಕ್‌ನಲ್ಲಿ ಇಂದು ನಡೆಯುತ್ತಿರುವ ಪಂದ್ಯವು ಭಾರತಕ್ಕೆ ಮಹತ್ವದ್ದಾಗಿದೆ. ಇಂದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವು ಗೆದ್ದರೆ ಸರಣಿ ಸಮಬಲಗೊಳ್ಳಲಿದೆ. ಸರಣಿಯ ಎರಡನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ 65 ರನ್‌ಗಳಿಂದ ಗೆದ್ದುಕೊಂಡಿದ್ದು, ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಕಿವೀಸ್ ತಂಡಕ್ಕೆ ಇದು ಡು ಆರ್ ಡೈ ಎಂಬಂತಾಗಿದೆ.