INDvsAFG 2nd T20: ಶಿವಂ ದುಬೆ, ಜೈಸ್ವಾಲ್ ಅರ್ಧಶತಕ -ಅಫ್ಘಾನ್ ವಿರುದ್ಧ ಗೆದ್ದು ಸರಣಿ ವಶಕ್ಕೆ ಪಡೆದ ಭಾರತ

ಇಂದೋರ್: ಆರಂಭಿಕ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ಹಾಗೂ ಆಲ್‌ರೌಂಡರ್ ಶಿವಂ ದುಬೈ ಅಬ್ಬರದ ಬ್ಯಾಟಿಂಗ್ ಸಹಾಯದಿಂದ ಭಾರತ ತಂಡವು ಅಫ್ಘಾನಿಸ್ತಾನದ ವಿರುದ್ಧ 6 ವಿಕೆಟ್‌ಗಳಿಂದ ಗೆಲುವು ಸಾಧಿಸಿದೆ. ಜೊತೆಗೆ ಸರಣಿಯನ್ನು 2-0 ಅಂತರದಿಂದ ವಶಕ್ಕೆ ಪಡೆದುಕೊಂಡಿದೆ.
ಇಂದೋರ್ನಲ್ಲಿ ಇಂದು ನಡೆದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ತಂಡವು ನಿಗದಿತ 20 ಓವರ್‌ಗಳಲ್ಲಿ 10 ವಿಕೆಟ್ ನಷ್ಟಕ್ಕೆ 172 ರನ್ ಗಳಿಸಿತ್ತು. 173 ರನ್‌ಗಳ ಟಾರ್ಗೆಟ್ ಬೆನ್ನಟ್ಟಿದ ಭಾರತವು 15.4 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿ ಜಯ ದಾಖಲಿಸಿದೆ.
ಟೀಂ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ 68 ರನ್ (34 ಎಸೆತ, 5 ಬೌಂಡರಿ, 6 ಸಿಕ್ಸ್), ಶಿವಂ ದುಬೆ 63 ರನ್ (32 ಎಸೆತ, 5 ಬೌಂಡರಿ, 4 ಸಿಕ್ಸ್) ಹಾಗೂ ವಿರಾಟ್ ಕೊಹ್ಲಿ 29 ರನ್ ಗಳಿಸಿದರು.
ಇದಕ್ಕೂ ಮುನ್ನ ತಂಡದ ಪರ ಗುಲ್ಬದಿನ್ ನಾಯಬ್ ಗರಿಷ್ಠ 57 ರನ್, ನಜೀಬುಲ್ಲಾ ಜದ್ರಾನ್ 23 ರನ್ ಗಳಿಸಿದ್ದರು. ಇನ್ನು ಭಾರತದ ಪರ ಅರ್ಶದೀಪ್ ಸಿಂಗ್ 3ವಿಕೆಟ್, ರವಿ ಬಿಷ್ಣೋಯಿ ಹಾಗೂ ಅಕ್ಷರ್ ಪಟೇಲ್ ತಲಾ 2 ವಿಕೆಟ್ ಮತ್ತು ಶಿವಂ ದುಬೆ 1 ವಿಕೆಟ್ ಪಡೆದುಕೊಂಡಿದ್ದರು.