INDvsSA 2nd Test: ಸಿರಾಜ್ ವೇಗಕ್ಕೆ ಹರಿಣರು ತತ್ತರ- 55 ರನ್‌ಗೆ ದಕ್ಷಿಣ ಆಫ್ರಿಕಾ ಆಲೌಟ್

INDvsSA 2nd Test: ಸಿರಾಜ್ ವೇಗಕ್ಕೆ ಹರಿಣರು ತತ್ತರ- 55 ರನ್‌ಗೆ ದಕ್ಷಿಣ ಆಫ್ರಿಕಾ ಆಲೌಟ್

ಕೇಪ್ ಟೌನ್: ಮೊಹಮ್ಮದ್ ಸಿರಾಜ್ ಮಾರಕ ಬೌಲಿಂಗ್ ದಾಳಿಗೆ ನಲುಗಿದ ದಕ್ಷಿಣ ಆಫ್ರಿಕಾ ತಂಡವು ಕೇವಲ 55 ರನ್‌ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಅಂತ್ಯಗೊಳಿಸಿದೆ. 

ಟೆಸ್ಟ್ ಸರಣಿಯ ಎರಡನೇ ಪಂದ್ಯದ ಆರಂಭದ ದಿನವೇ ದಕ್ಷಿಣ ಆಫ್ರಿಕಾ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದೆ. ಕೇವಲ 23.2 ಓವರ್‌ಗಳಲ್ಲಿ 55 ರನ್ ಗಳಿಸಿ ಆಲೌಟ್ ಆಗಿದೆ. ಭಾರತ ತಂಡದ ಪರ ಮೊಹಮ್ಮದ್ ಸಿರಾಜ್ 6 ವಿಕೆಟ್ ಕಿತ್ತು ಮಿಂಚಿನ ಪ್ರದರ್ಶನ ನೀಡಿದರೆ, ಅನುಭವಿ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಹಾಗೂ ಯುವ ವೇಗದ ಬೌಲರ್ ಮುಕೇಶ್ ಕುಮಾರ್ ತಲಾ 2 ವಿಕೆಟ್ ಉರುಳಿಸಿದರು.