INDvsSA: ಯುವಿ ದಾಖಲೆ ಮುರಿದ ಸೂರ್ಯಕುಮಾರ್

ಜೋಹಾನ್ಸ್‌ಬರ್ಗ್: ದಕ್ಷಿಣ ಆಫ್ರಿಕಾ ನೆಲದಲ್ಲಿ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಸಿಡಿಸಿದ ಭಾರತೀಯ ಆಟಗಾರ ಎಂಬ ಯುವರಾಜ್ ಸಿಂಗ್ ಅವರ ದಾಖಲೆಯನ್ನು ಸೂರ್ಯಕುಮಾರ್ ಯಾದವ್ ಗುರುವಾರ ಮುರಿದಿದ್ದಾರೆ.
ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ T20 ಪಂದ್ಯದಲ್ಲಿ ಸೂರ್ಯಕುಮಾರ್ 56 ಎಸೆತಗಳಲ್ಲಿ 7 ಬೌಂಡರಿ, 8 ಸಿಕ್ಸ್ ಸಹಿತ 100 ರನ್ ಸಿಡಿಸಿದರು. ಯುವರಾಜ್ ಸಿಂಗ್ ಡರ್ಬನ್‌ನಲ್ಲಿ 2007 ರ ಟಿ20 ವಿಶ್ವಕಪ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಏಳು ಸಿಕ್ಸರ್‌ಗಳನ್ನು ಸಿಡಿಸುವ ಮೂಲಕ ಹಿಂದಿನ ದಾಖಲೆಯನ್ನು ನಿರ್ಮಿಸಿದ್ದರು.