IPL 2022: CSK vs RCB: ಟಾಸ್ ಗೆದ್ದ ಚೆನ್ನೈ, ಬೌಲಿಂಗ್ ಆಯ್ಕೆ

IPL 2022: CSK vs RCB: ಟಾಸ್ ಗೆದ್ದ ಚೆನ್ನೈ, ಬೌಲಿಂಗ್ ಆಯ್ಕೆ

ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್‌ ತಂಡದ ನಾಯಕ ಎಂ.ಎಸ್.ಧೋನಿ ಬೌಲಿಂಗ್ ಆಯ್ದುಕೊಂಡಿದ್ದಾರೆ. 

ಪುಣೆ ಸ್ಟೇಡಿಯಂನಲ್ಲಿ ಐಪಿಎಲ್ 2022ರ ಭಾಗವಾಗಿ ಇಂದು ನಡೆಯುತ್ತಿರುವ 49ನೇ ಪಂದ್ಯದಲ್ಲಿ ಫಾಫ್ ಡು ಪ್ಲೆಸ್ಸಿಸ್ ನೇತೃತ್ವದ ಆರ್‌ಸಿಬಿ ತಂಡವು ಮೊದಲು ಬ್ಯಾಟಿಂಗ್ ಮಾಡಲಿದೆ. ಇಂದಿನ ಪಂದ್ಯವು ಆರ್‌ಸಿಬಿಗೆ ಮಾಡು ಇಲ್ಲವೆ ಮಡಿ ಎಂಬಂತಾಗಿದೆ. ಗುಜರಾತ್ ಟೈಟಾನ್ಸ್‌ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡಿದ್ದ ದಿನೇಶ್ ಕಾರ್ತಿಕ್ ಇಂದಿನ ಪಂದ್ಯಕ್ಕೆ ಲಭ್ಯವಿಲ್ಲ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಇಂದು ದಿನೇಶ್ ಕಾರ್ತಿಕ್ ಆರ್‌ಸಿಬಿ ಪರ ಅಬ್ಬರಿಸಲು ಸಿದ್ಧರಾಗಿದ್ದಾರೆ.