IPL 2022: ಹರಾಜಿನ ಬಳಿಕ ಹೀಗಿದೆ ಆರ್‌ಸಿಬಿ ತಂಡ- ಇಬ್ಬರು ಕನ್ನಡಿಗರಿಗೆ ಸ್ಥಾನ.!

IPL 2022: ಹರಾಜಿನ ಬಳಿಕ ಹೀಗಿದೆ ಆರ್‌ಸಿಬಿ ತಂಡ- ಇಬ್ಬರು ಕನ್ನಡಿಗರಿಗೆ ಸ್ಥಾನ.!

ಬೆಂಗಳೂರು: ಇಂಡಿಯನ್ ಪ್ರಿಮೀಯರ್ ಲೀಗ್ (ಐಪಿಎಲ್)ನ 15ನೇ ಆವೃತ್ತಿಯ ಮೆಗಾ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಒಟ್ಟು 19 ಆಟಗಾರರನ್ನು ಖರೀದಿಸಿದೆ. ಇನ್ನು ಇದಕ್ಕೂ ಮುನ್ನ ಮೂವರು ಆಟಗಾರರನ್ನು ಆರ್​ಸಿಬಿ ರಿಟೈನ್ ಮಾಡಿಕೊಂಡಿತ್ತು. ಅದರಂತೆ ಇದೀಗ ಆರ್​ಸಿಬಿ ತಂಡದಲ್ಲಿ ಒಟ್ಟು 22 ಆಟಗಾರರಿದ್ದಾರೆ. ವಿಶೇಷ ಎಂದರೆ ಈ ಬಾರಿ ಆರ್​ಸಿಬಿ ತಂಡದಲ್ಲಿ ಇಬ್ಬರು ಕನ್ನಡಿಗರಿದ್ದಾರೆ. ವಿಶೇಷವೆಂದರೆ ದಿನೇಶ್‌ ಕಾರ್ತಿಕ್ ಏಳು ವರ್ಷಗಳ ಬಳಿಕ ಮತ್ತೆ ಆರ್‌ಸಿಬಿ ತಂಡವನ್ನು ಸೇರಿದ್ದಾರೆ. ಆರ್​ಸಿಬಿ ಹೊಸ ತಂಡ ಹೀಗಿದೆ: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡುಪ್ಲೆಸಿಸ್, ವಾನಿಂದು ಹಸರಂಗ, ದಿನೇಶ್ ಕಾರ್ತಿಕ್, ಹರ್ಷಲ್ ಪಟೇಲ್, ಜಾಶ್ ಹೇಜಲ್‌ವುಡ್, ಶಹಬಾಜ್ ಅಹ್ಮದ್, ಅನುಜ್ ರಾವತ್, ಆಕಾಶ್ ದೀಪ್, ಮಹಿಪಾಲ್ ಲೊಮ್ರೋರ್, ಫಿನ್ ಆಲೆನ್, ಶೆರ್ಫೇನ್ ರುದರ್‌ಫೋರ್ಡ್, ಜೇಸನ್ ಬೆಹ್ರೆನ್‌ಡಾರ್ಫ್, ಸುಯಾಶ್‌ ಪ್ರಭುದೇಸಾಯ್, ಚಾಮಾ ಮಿಲಿಂದ್, ಅನೀಶ್ವರ್‌ ಗೌತಮ್, ಕರಣ್‌ ಶರ್ಮಾ, ಸಿದ್ಧಾರ್ಥ್ ಕೌಲ್, ಡೇವಿಡ್ ವಿಲ್ಲಿ, ಲವ್ನೀತ್ ಸಿಸೋಡಿಯಾ.