IPL 2024 | CSKvsPBKS: ಪಂಜಾಬ್ ವಿರುದ್ಧದ ಸರಣಿ ಸೋಲಿನಿಂದ ಹೊರ ಬಂದ ಚೆನ್ನೈ

IPL 2024 | CSKvsPBKS: ಪಂಜಾಬ್ ವಿರುದ್ಧದ ಸರಣಿ ಸೋಲಿನಿಂದ ಹೊರ ಬಂದ ಚೆನ್ನೈ

ಧರ್ಮಶಾಲಾ: ಧರ್ಮಶಾಲಾದಲ್ಲಿ ಇಂದು ನಡೆದ ಐಪಿಎಲ್ 2024ರ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡವು 28 ರನ್‌ಗಳಿಂದ ಗೆದ್ದು ಬೀಗಿದೆ. 

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಚೆನ್ನೈ ತಂಡವು 9 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಿತ್ತು. ಬಳಿಕ ಬ್ಯಾಟಿಂಗ್ ಮಾಡಿದ ಪಂಜಾಬ್ ತಂಡವು ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 139 ರನ್ ಗಳಿಸಿ ಸೋಲು ಒಪ್ಪಿಕೊಂಡಿತು. ಈ ಗೆಲುವಿನೊಂದಿಗೆ CSK ತ‌ಂಡವು ಪಂಜಾಬ್ ವಿರುದ್ಧದ ಐದು ಪಂದ್ಯಗಳ ಸೋಲಿನ ಸರಣಿಯನ್ನು ಕೊನೆಗೊಳಿಸಿತು ಮತ್ತು ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಏರಿತು. ಈ ಪಂದ್ಯದಲ್ಲಿ ಸಿಎಸ್ ಕೆ ಪರ ರವೀಂದ್ರ ಜಡೇಜಾ 43(26) ರನ್ ಗಳಿಸಿ ಮೂರು ವಿಕೆಟ್ ಪಡೆದರು.